ಕಾಸರಗೋಡು; ಸ್ಕೂಟರ್ ಅಪಘಾತ, ಎಂಬಿಬಿಎಸ್ ವಿದ್ಯಾರ್ಥಿನಿ ಮೃತ್ಯು

ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಎಂಬಿಬಿಎಸ್ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಾಸರಗೋಡಿನ ಪಿಲಿಕುಂಜೆ ಎಂಬಲ್ಲಿ ನಡೆದಿದೆ.

ಕಣ್ಣೂರು ಸೈಂಟ್ ಮೈಕಲ್ ಶಾಲಾ ಸಮೀಪದ ಮಹೇಶ್ಚಂದ್ರ ಬಾಳಿಗಾರವರ ಪುತ್ರಿ ಶಿವಾನಿ ಬಾಳಿಗಾ(20) ಮೃತ ಪಟ್ಟವರು.

ಶಿವಾನಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿದ್ದರು. ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಸಂಜೆ ಮೃತಪಟ್ಟಿದ್ದಾರೆ.

ಇವರು ಮಣಿಪಾಲ ವಿಶ್ವವಿದ್ಯಾನಿಲಯದಲ್ಲಿ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು.

ಟಾಪ್ ನ್ಯೂಸ್