ಮ‌ಹಿಳೆಯರಿಗೆ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಇಬ್ಬರು ಯುವಕರಿಗೆ ಚಪ್ಪಲಿ ಹಾರ ಹಾಕಿ ಥಳಿತ

ಮಧ್ಯಪ್ರದೇಶ;ಶಿವಪುರಿ ಜಿಲ್ಲೆಯಲ್ಲಿ ಕೆಲವು ಮಹಿಳೆಯರಿಗೆ ಕಿರುಕುಳ ನೀಡಿದ್ದಾರೆಂದು ಇಬ್ಬರು ಯುವಕರಿಗೆ ಚಪ್ಪಲಿ ಹಾರ ಹಾಕಿ ಥಳಿಸಿದ ಘಟನೆ ನಡೆದಿದೆ.

ಯುವಕರ ಮುಖಕ್ಕೆ ಕಪ್ಪು ಬಣ್ಣ ಬಳಿದು, ಚಪ್ಪಲಿ ಹಾರ ಹಾಕಿ, ಗ್ರಾಮದಾದ್ಯಂತ ಮೆರವಣಿಗೆ ನಡೆಸಿದ್ದಾರೆ ಎಂದು ಕೂಡ ಆರೋಪಿಸಲಾಗಿದೆ.

ಇದೀಗ ಆರೋಪಿಗಳ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿರುವ ಬಗ್ಗೆ ವರದಿಯಾಗಿದೆ.ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರನ್ನು ಬಂಧಿಸಿದ್ದಾರೆ.

ಜೂನ್ 30 ರಂದು ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆದ ಬಳಿಕ ವಿಷಯ ಬೆಳಕಿಗೆ ಬಂದಿದೆ.

ಆರೋಪಿಗಳ ಮನೆಗಳನ್ನು ಕೆಡವುವಂತೆ ಒತ್ತಾಯಿಸಿ ಸಂತ್ರಸ್ತೆಯ ಸಹೋದರ ಜುಲೈ 3 ರಂದು ಪೊಲೀಸರನ್ನು ಸಂಪರ್ಕಿಸಿದ್ದರು. ಆರೋಪಿಗಳು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಕೊಂಡಿದ್ದು, ಗ್ರಾಮಸ್ಥರು ಬಳಸುವ ಮಾರ್ಗಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಸಂತ್ರಸ್ತೆಯ ಸಹೋದರ ಆರೋಪಿಸಿದ್ದಾರೆ.

ಸುಮಾರು ಮೂರು ಹೆಕ್ಟೇರ್ ಅರಣ್ಯ ಭೂಮಿಯನ್ನು ಮೂವರು ವ್ಯಕ್ತಿಗಳು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ. 2022ರ ಸೆಪ್ಟೆಂಬರ್ 19ರಂದು ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ವಿಭಾಗೀಯ ಅರಣ್ಯಾಧಿಕಾರಿ ತೆರವು ಆದೇಶ ಹೊರಡಿಸಿದ್ದರು. ಸ್ವಯಂಪ್ರೇರಣೆಯಿಂದ ಒತ್ತುವರಿ ತೆರವು ಮಾಡುವಂತೆ ಸೂಚನೆ ನೀಡಿದ್ದರೂ, ವ್ಯಕ್ತಿಗಳು ಅನುಸರಿಸಲು ವಿಫಲರಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಗಳ ನಿವಾಸವನ್ನು ಕೂಡ ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್