ನಾನು ರಾಹುಲ್ ಗಾಂಧಿಯ ಅಭಿಮಾನಿ ಎಂದು ರಾಹುಲ್ ನಾಯಕತ್ವವನ್ನು ಹೊಗಳಿದ ಶಿವರಾಜ್ ಕುಮಾರ್

ತೀರ್ಥಹಳ್ಳಿ;ಬಾಳೇಬೈಲು ಮೈದಾನದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ನಟ ಶಿವರಾಜ್ ಕುಮಾರ್ ಭಾಗಿಯಾಗಿದ್ದರು.

ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಶಿವರಾಜ್ ಕುಮಾರ್ “ನಾನು ಕೂಡ ನಿಮ್ಮ ಹಾಗೆ ರಾಹುಲ್ ಗಾಂಧಿಯವರ ಅಭಿಮಾನಿಯಾಗಿ ಇಲ್ಲಿಗೆ ಬಂದಿದ್ದೇನೆ.ಅವರು ಇತ್ತೀಚೆಗೆ ಭಾರತ್ ಜೋಡೊ ಯಾತ್ರೆ ಮೂಲಕ ದೇಶಾದ್ಯಂತ ನಡೆದರು. ಭಾರತ್ ಜೋಡೊ ಯಾತ್ರೆಯಿಂದ ನನಗೆ ಉತ್ತೇಜನ ಸಿಕ್ಕಿದೆ ಎಂದು ಹೇಳಿದ್ದಾರೆ.

ಫಿಟ್ನೆಸ್ ಅಂದರೆ ನನಗೆ ತುಂಬಾ ಇಷ್ಟ. ಫಿಟ್ನೆಸ್ ಜೊತೆಗೆ ಒಂದು ಒಳ್ಳೆಯ ಉದ್ದೇಶದೊಂದಿಗೆ ಅವರು ಆ ಯಾತ್ರೆಯನ್ನು ಮಾಡಿದ್ದಾರೆ ಎಂದು ರಾಹುಲ್ ಗಾಂಧಿಯ ನಾಯಕತ್ವವನ್ನು ಶಿವರಾಜ್ ಕುಮಾರ್ ಕೊಂಡಾಡಿದ್ದಾರೆ.

ಸಮಾವೇಶದಲ್ಲಿ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್, ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ಕಿಮ್ಮನೆ ರತ್ನಾಕರ್, ಗೀತಾ ಶಿವರಾಜ್ ಕುಮಾರ್ ಉಪಸ್ಥಿತರಿದ್ದರು.ಸಭೆಯಲ್ಲಿ ಶಿವರಾಜ್ ಕುಮಾರ್ ಅವರನ್ನು ಅಪ್ಪಿಕೊಂಡ ರಾಹುಲ್ ಗಾಂಧಿ ಶುಭ ಹಾರೈಕೆ ಮಾಡಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com