ಬಂಟ್ವಾಳ; ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಹೋಗುವುದು ಬಿಟ್ಟು ನೇರವಾಗಿ ಪೊಲೀಸ್ ಠಾಣೆಗೆ ಹೋದ ವ್ಯಕ್ತಿ!

ಬಂಟ್ವಾಳ:ರಕ್ತಸಿಕ್ತವಾಗಿ ಬಿದ್ದುಕೊಂಡಿದ್ದ ಕುಡುಕನನ್ನು ಆಸ್ಪತ್ರೆಗೆ ದಾಖಲಿಸಿದ್ದಕ್ಕೆ ಪೋಲೀಸರಿಗೆ ಆಸ್ಪತ್ರೆಯಿಂದ ಠಾಣೆಗೆ ಆಗಮಿಸಿ ಧನ್ಯವಾದ ಹೇಳಿದ ಅಪರೂಪದ ಘಟನೆಯೊಂದು ನಡೆದಿದೆ.

ಜೂನ್.13ರಂದು ನರಿಕೊಂಬು ಗ್ರಾ.ಪಂಚಾಯತ್ ಕಚೇರಿಯ ಜಗಲಿಯಲ್ಲಿ ವ್ಯಕ್ತಿಯೋರ್ವ ಬಿದ್ದುಕೊಂಡ ಬಗ್ಗೆ ಗ್ರಾಮ ಪಂಚಾಯತ್ ನ ಅಧಿಕಾರಿಗಳ ಗಮನಕ್ಕೆ ಬರುತ್ತದೆ.

ಜೂ.12ರಂದು ರಾತ್ರಿ ಈತ ಪಂಚಾಯತ್ ನ ಜಗುಲಿಗೆ ಪ್ರವೇಶ ಮಾಡಿದ್ದ.ಈ ವೇಳೆ ಈತನ‌ ಕೈಗೆ ಗಾಯವಾಗಿ ರಕ್ತಸ್ರಾವವಾಗಿತ್ತು.

ಕುಡಿದ‌ ಮತ್ತಿನಲ್ಲಿ ಕಚೇರಿ ಬಳಿಯೇ ಮಲಗಿದ್ದ.ಶಿವಶಂಕರ ರಕ್ತದ ನಡುವೆ ಬಿದ್ದುಕೊಂಡಿದ್ದರಿಂದ ಜನರು ಹತ್ತಿರ ಹೋಗಲು ಹೆದರುತ್ತಿದ್ದರು.

ಘಟನೆ ತಿಳಿದು ಸ್ಥಳಕ್ಕೆ ಬಂದ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಅಂಬ್ಯುಲೆನ್ಸ್ ಮೂಲಕ ಮಂಗಳೂರು ವೆನ್ಲಕ್ ಆಸ್ಪತ್ರೆಗೆ ದಾಖಲಿಸಿ ಅವರ ಮನೆಯವರಿಗೆ ಮಾಹಿತಿ ನೀಡಿದ್ದರು.

ಆತ ನಿನ್ನೆ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಕೂಡಲೇ ಮೊದಲು ಬಂಟ್ವಾಳ ನಗರ ಪೋಲಿಸ್ ಠಾಣೆಗೆ ಬಂದು ಧನ್ಯವಾದ ಹೇಳಿದ್ದಾನೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದ ಮೀಲಾದ್ ರ್ಯಾಲಿಯಲ್ಲಿ ತೆರಳುತ್ತಿದ್ದ ಯುವಕರು

ಕಾಪು;ಮೀಲಾದ್ ರ್ಯಾಲಿಯಲ್ಲಿ ಸಾಗುತ್ತಿದ್ದ ಯುವಕರ ಗುಂಪು ಅಪಘಾತದ ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ

ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆ; ಭುಗಿಲೆದ್ದ ಭಾರೀ ಪ್ರತಿಭಟನೆ, ಇಂಟರ್ನೆಟ್ ಸ್ಥಗಿತ