ಜನಪ್ರಿಯ ಶಾಪಿಂಗ್ ಮಾಲ್ ಕಾಂಪ್ಲೆಕ್ಸ್ ನಲ್ಲಿ ಅಗ್ನಿ ಅವಘಡ ;ನಾಲ್ವರು ಯುವತಿಯರು ಸೇರಿ ಆರು ಮಂದಿ ಉಸಿರುಗಟ್ಟಿ ಸಾವು
ಹೈದರಾಬಾದ್ (ತೆಲಂಗಾಣ): ಸಿಕಂದರಾಬಾದ್‌ನಲ್ಲಿ ಗುರುವಾರ ಸಂಭವಿಸಿದ ಮತ್ತೊಂದು ಭಾರಿ ಅಗ್ನಿ ಅವಘಡದಲ್ಲಿ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಸಿಕಂದರಾಬಾದ್‌ನ ಜನಪ್ರಿಯ ಶಾಪಿಂಗ್ ಮಾಲ್ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಬೆಂಕಿಯಲ್ಲಿ ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಹೊಗೆ ಸೇವನೆಯಿಂದ ಸಂತ್ರಸ್ತರು ಸಾವನ್ನಪ್ಪಿರುವ ಸಾಧ್ಯತೆ ಇದೆ ಆದರೆ ತನಿಖೆಯ ನಂತರ ಸಾವಿಗೆ ಖಚಿತ ಕಾರಣ ತಿಳಿಯಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಹನ್ನೆರಡು ಜನರನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಮತ್ತು ಅವರಲ್ಲಿ ಆರು ಮಂದಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ. ಉಳಿದವರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಾಲ್ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ನಾಲ್ವರು ಯುವತಿಯರು ಹಾಗೂ ಇಬ್ಬರು ಯುವಕರು ಅಸುನೀಗಿದ್ದಾರೆ. ದಟ್ಟ ಹೊಗೆಯಿಂದಾಗಿ ಉಸಿರುಗಟ್ಟಿ ಇವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.