ಬೆಳಗಾವಿ;ಶ್ರೀರಾಮ ಸೇನೆಯ ಮುಖಂಡನ ಮೇಲೆ ಗುಂಡಿನ ದಾಳಿ

ಬೆಳಗಾವಿ;ಶ್ರೀರಾಮ ಸೇನೆಯ ಜಿಲ್ಲಾ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತಾಲೂಕಿನ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಎದುರು ನಡೆದಿದೆ.

ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ.ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ.

ರವಿ ಹಾಗೂ ಅವರ ಮನೋಜ್‌ ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಇಬ್ಬರು ಬೈಕ್‌ ನಲ್ಲಿ ಬಂದು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆನ್ನಲಾಗಿದೆ.

ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್