ಕಲಬುರಗಿ:ಪೊಲೀಸರಿಂದ ತಪ್ಪಿಸಿಕೊಳ್ಳುವಾಗ ಕುಸಿದು ಬಿದ್ದು ಯುವಕ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಗ್ರಾಮದಲ್ಲಿ ನಡೆದಿದೆ.
ಸಿದ್ದಪ್ಪ ಕೊಂಡಾ(20)ಮೃತ ಯುವಕ.
ಮಂಗಳವಾರ ತಡರಾತ್ರಿ ಲಾಡ್ಲಾಪುರ ಗ್ರಾಮದ ಹಾಜಿ ಸರ್ವರ್ ದರ್ಗಾ ಬಳಿ 10 ರಿಂದ 15 ಜನರ ತಂಡ ಇಸ್ಪಿಟ್ ಆಡುತ್ತಿದ್ದಾಗ ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ. ಈ ವೇಳೆ ಗಾಬರಿಗೊಂಡ ತಂಡ ಪೊಲೀಸರಿಗೆ ಹೆದರಿ ಚೆಲ್ಲಾಪಿಲ್ಲಿಯಾಗಿ ಓಡುವಾಗ ಸಿದ್ದಪ್ಪ ಕೊಂಡ ಕುಸಿದುಬಿದ್ದು ಮೃತಪಟ್ಟಿದ್ದಾನೆ.
ಘಟನೆ ಸಂಬಂಧ ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.