ಮತದಾರರಿಗೆ ಬೆದರಿಕೆ ಹಾಕಿದ್ರಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ? ಏನಿದು ಕಾಂಗ್ರೆಸ್ ಆರೋಪ?

ಬೆಂಗಳೂರು;ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಮೇಲಿಂದ ಮೇಲೆ ಮತದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜ್ಯದಲ್ಲಿ ಬಿಜೆಪಿ ಸೋತರೆ ಕೇಂದ್ರದಿಂದ ಬರುವ ಯೋಜನೆಗಳು ಬಂದ್ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹರಪ್ಪನಹಳ್ಳಿ ಪಟ್ಟಣದ ಪ್ರವಾಸಿ ಮಂದಿರ ವೃತ್ತದಲ್ಲಿ ಭಾನುವಾರ ಬಿಜೆಪಿ ಅಭ್ಯರ್ಥಿ ಜಿ.
ಕರುಣಾಕರ ರೆಡ್ಡಿ ಪರ ರೋಡ್ ಶೋ ನಡೆಸಿದ ಬಳಿಕ ಬಹಿರಂಗ ಸಭೆಯಲ್ಲಿ ಹೇಳಿದ್ದಾರೆ ಎಂದು ಕಾಂಗ್ರೆಸ್ ಕಿಡಿ‌ಕಾರಿದೆ.

ಕೇಂದ್ರ ಮತ್ತು ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರವನ್ನು ಬೆಂಬಲಿಸಿ, ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಮಾತ್ರ ಕೇಂದ್ರದ ಯೋಜನೆಗಳು ಮುಂದುವರೆಯುತ್ತವೆ.
ಸಿದ್ದರಾಮಯ್ಯ ಸರ್ಕಾರ ಬಂದರೆ ‘ಕಿಸಾನ್ ಸಮ್ಮಾನ್’ ಯೋಜನೆ ಸೇರಿ ಹಲವು ಯೋಜನೆಗಳು ಬಂದ್ ಆಗಲಿವೆ ಎಂದು ಹೇಳಿದ್ದರು.

ರಾಜ್ಯದಲ್ಲಿ ಬಿಜೆಪಿ ಸೋತರೆ ಯೋಜನೆಗಳೆಲ್ಲ ಬಂದ್ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಹೇಳಿಕೆ ಸ್ಪಷ್ಟವಾಗಿ ಮತದಾರರಿಗೆ ಒಡ್ಡಿರುವ ಬೆದರಿಕೆಯಾಗಿದೆ. ಚುನಾವಣಾ ಆಯೋಗ ತಕ್ಷಣ ಮಧ್ಯೆ ಪ್ರವೇಶಿಸಿ ಬಿಜೆಪಿಯ ಎಲ್ಲ ಅಭ್ಯರ್ಥಿಗಳನ್ನು ಅನರ್ಹಗೊಳಿಸುವ ದಿಟ್ಟ ಕ್ರಮಕೈಗೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,
ಚುನಾವಣಾ ಆಯೋಗ ನಡ್ಡಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿ ಅವರ ವಿರುದ್ಧ ಕ್ರಮಕೈಗೊಳ್ಳಬೇಕು. ಕಾಂಗ್ರೆಸ್ ಪಕ್ಷ ಸದ್ಯದಲ್ಲಿಯೇ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಲಿದೆ ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್