ಬೆಂಗಳೂರು;ಸಿದ್ದರಾಮಯ್ಯ ವಿರುದ್ದ ಪ್ರಚೋದನಾಕಾರಿ ಹೇಳಿಕೆ ವಿರುದ್ದ ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಪ್ರಚೋದನೆ ಕೇಸ್ ದಾಖಲಿಸಲಾಗಿದೆ.
ಸಚಿವ ಅಶ್ವತ್ಥನಾರಾಯಣ ವಿರುದ್ಧ ಕೊಲೆ ಪ್ರಚೋದನೆ ಆರೋಪದಡಿ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಮುಖಂಡರು ದೂರು ದಾಖಲಿಸಿದ್ದಾರೆ.
ಸಚಿವ ಅಶ್ವತ್ಥನಾರಾಯಣ ಅವರು ಟಿಪ್ಪುವನ್ನು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನೂ ಹೊಡೆದು ಹಾಕಬೇಕು ಎಂದು ಹೇಳಿಕೆ ನೀಡಿದ್ದರು.ಈ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.