ಸಿಎಂ ಆದ ಬಳಿಕ ಮೊದಲ ಬಾರಿಗೆ ವರುಣಾಗೆ ತೆರಳಿದ ಸಿದ್ದರಾಮಯ್ಯ; ಕ್ಷೇತ್ರದ ಜನರಿಗೆ ಕೃತಜ್ಞತೆ ಸಲ್ಲಿಸಿ ಏನೆಲ್ಲಾ ಹೇಳಿದ್ರು?

ಮೈಸೂರು;ಸಿಎಂ ಆದ ಬಳಿಕ ಮೊದಲ ಬಾರಿಗೆ ಸ್ವಕ್ಷೇತ್ರ ವರುಣಾಗೆ ತೆರಳಿದ ಸಿಎಂ ಸಿದ್ದರಾಮಯ್ಯ ಸುತ್ತೂರಿನಲ್ಲಿ ನಡೆದ ಕೃತಜ್ಞತಾ ಸಮರ್ಪಣಾ ಸಭೆಯಲ್ಲಿ ಭಾಗವಹಿಸಿದ್ದರು.

ಈ ವೇಳೆ ಕ್ಷೇತ್ರದ ಜನರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಇದು ನನ್ನ ಕೊನೆ ಚುನಾವಣೆ ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರೆಸುತ್ತೇನೆ ಎಂದು ಹೇಳಿದ್ದಾರೆ.

2013ರಲ್ಲಿ ಮುಖ್ಯಮಂತ್ರಿ ಆಗಿದ್ದಾಗ ನುಡಿದಂತೆ ನಡೆದಿದ್ದೇನೆ. ಎಲ್ಲಾ ಜಾತಿ, ಧರ್ಮ ಮತ್ತು ಎಲ್ಲಾ ವರ್ಗಗಳ ಪರವಾಗಿ ಕಲ್ಯಾಣಕ್ಕೆ ಕಾರ್ಯಕ್ರಮ ರೂಪಿಸಿದ್ದೇನೆ.ಈ ಬಾರಿಯು ಈ ರೀತಿಯ ಕಲ್ಯಾಣ ಯೋಜನೆ ಇನ್ನಷ್ಟು ಜಾರಿಗೆ ತರುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಕುರ್ಚಿ ಎಂದರೆ ಸುಖದ ಸುಪ್ಪತ್ತಿಗೆ ಅಲ್ಲ, ಜನರ ಬದುಕನ್ನು ಸುಧಾರಿಸಲು ಸಿಗುವ ಅವಕಾಶ ಎಂಬುದು ನನ್ನ ಭಾವನೆ, ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಗ್ಯಾರಂಟಿಗಳು ಜಾರಿ ಆಗುವುದಿಲ್ಲ, ರಾಜ್ಯ ದಿವಾಳಿ ಆಗುತ್ತದೆ ಎಂದಿದ್ದರು. ನಾವು ಈಗ ಐದನ್ನೂ ಜಾರಿ ಮಾಡಿದ್ದೇವೆ.ಬಿಜೆಪಿಗರು ಯೋಜನೆಗೆ ಸಹಕಾರ ನೀಡುವ ಬದಲು ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಭ್ರಷ್ಟಚಾರ, ದುರಾಡಳಿತ, ಅಭಿವೃದ್ಧಿಹೀನ ಮತ್ತು ಸಮಾಜವನ್ನು ಒಡೆಯುವ ದುಷ್ಟ ರಾಜಕಾರಣವನ್ನು ರಾಜ್ಯದ ಜನತೆ ಸೋಲಿಸಿ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದಾರೆ. ಈ ಕಾರಣಕ್ಕಾಗಿ ನಾಡಿನ ಜನತೆಗೆ ನಾನು ಕೃತಜ್ಞ. ಬಸವಾದಿ ಶರಣರು ನುಡಿದಂತೆ ನಡೆದಿದ್ದರು. ಅದನ್ನೇ ಮಾದರಿಯನ್ನಾಗಿ ಇಟ್ಟುಕೊಂಡು, ನಾನು ಮೊದಲ ಬಾರಿ ಬಸವ ಜಯಂತಿ ದಿನವೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ನುಡಿದಂತೆ ನಡೆದಿದ್ದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಕ್ಷೇತ್ರದ ಮತದಾರರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿದ್ದರು.

ಟಾಪ್ ನ್ಯೂಸ್