ಬೆಂಗಳೂರು;ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಸಿದ್ದರಾಮಯ್ಯ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರಾಗಿ ಸಿದ್ದರಾಮಯ್ಯ ಹಾಗೂ ಏಕೈಕ ಉಪ ಮುಖ್ಯಮಂತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಗುರುವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತವಾಗಿ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಕೆ.ಸಿ ವೇಣು ಗೋಪಾಲ್, ಮೇ 20ರಂದು ಮಧ್ಯಾಹ್ನ ನೂತನ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಜೊತೆಗೆ ಕೆಲವು ಸಚಿವರು ಕೂಡ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದರು.
ಮೇ 20 ರಂದು ಅಂದ್ರೆ ಇದೇ ಶನಿವಾರ ಸಿದ್ದರಾಮಯ್ಯ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಲಿದ್ದಾರೆ. ಇನ್ನು ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಕಂಠೀರವ ಸ್ಟೇಡಿಯಂನಲ್ಲಿ ನಡೆಯಲಿದೆ.
ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿಂದ ನಡೆದ ಹಲವು ಸಭೆಯಲ್ಲಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
ಕಳೆದ 5 ದಿನಗಳಿಂದ ಕಾಂಗ್ರೆಸ್ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಭಾರೀ ಕಸರತ್ತು ನಡೆಸಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸಭೆಗಳಲ್ಲಿ ಸಿಎಂ ರೇಸ್ನಲ್ಲಿದ್ದ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನನಗೆ ಸಿಎಂ ಪಟ್ಟ ಬೇಕೆಂದು ಜಿದ್ದಿಗೆ ಬಿದ್ದಿದ್ದರು.
ಕಾಂಗ್ರೆಸ್ ಹೈಕಮಾಂಡ್ ಸಂಧಾನ ಸೂತ್ರ ಎಣೆದಿದ್ದು, ಇಂದು ಸಿದ್ದರಾಮಯ್ಯ ಅವರೇ ಮತ್ತೊಮ್ಮೆ ರಾಜ್ಯದ ಸಿಎಂ ಆಗಲಿದ್ದಾರೆ ಎಂದು ಅಧಿಕೃತವಾಗಿ ಘೋಷಣೆ ಮಾಡಲಾಗುತ್ತಿದೆ.