BIG NEWS ಕೋಲಾರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಣೆ

ಕೋಲಾರ;2023ರ ವಿಧಾನಸಭೆ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಕೋಲಾರದಿಂದ ಸ್ಪರ್ದಿಸುವ ಕುರಿತು ಘೋಷಣೆ ಮಾಡಿದ್ದಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಮಗನಿಗೆ ವರುಣಾ ಕ್ಷೇತ್ರವನ್ನು ಬಿಟ್ಟು ಕೊಟ್ಟು ಚಾಮುಂಡೇಶ್ವರಿ ಹಾಗೂ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸಿದ್ದರು.

ಈ ಬಾರಿ ಸಿದ್ದರಾಮಯ್ಯ ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಭಾರೀ‌ ಚರ್ಚೆ ನಡೆದಿತ್ತು.ಇದೀಗ ಕೋಲಾರದಿಂದ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಟಾಪ್ ನ್ಯೂಸ್