ಮುಂದಿನ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ‌ಸ್ಪರ್ಧೆ ಸಾಧ್ಯತೆ; ಯಾವುದು ರಾಜಕೀಯ ಲೆಕ್ಕಾಚಾರದ ಆ ಕ್ಷೇತ್ರ?

ಮುಂದಿನ ಚುನಾವಣೆಯಲ್ಲಿ ಇದೇ ಕ್ಷೇತ್ರದಲ್ಲಿ ಸಿದ್ದರಾಮಯ್ಯ ‌ಸ್ಪರ್ಧೆ ಸಾಧ್ಯತೆ;ಯಾವುದು ರಾಜಕೀಯ ಲೆಕ್ಕಾಚಾರದ ಆ ಕ್ಷೇತ್ರ?
ಬೆಂಗಳೂರು; ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ರಾಜ್ಯ ರಾಜಕೀಯದ ಕೇಂದ್ರ ಬಿಂದುವಾಗಿದ್ದಾರೆ.ಸಾವರ್ಕರ್, ಮೊಟ್ಟೆ ವಿವಾದದ ಬಳಿಕ ಮತ್ತೆ ಸಿದ್ದರಾಮಯ್ಯನವರು ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ವಿಚಾರ ಮತ್ತೆ ಮುನ್ನಲೆಗೆ ಬರಲಾರಂಭಿಸಿದೆ.
ಕೆಲವು ತಿಂಗಳ ಹಿಂದೆ ಜಮೀರ್ ಅಹ್ಮದ್ ಖಾನ್ ಅವರು ಚಾಮರಾಜಪೇಟೆಯಿಂದ ಸಿದ್ದರಾಮಯ್ಯನವರು ಸ್ಪರ್ಧಿಸಿದರೆ ಕ್ಷೇತ್ರ ಬಿಟ್ಟುಕೊಡಲು ಸಿದ್ದ ಎನ್ನುವ ಮಾತನ್ನು ಹೇಳಿದ್ದರು. ಕಳೆದ ಬಾರಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 36 ಸಾವಿರ ಮತಗಳ ಅಂತರದಿಂದ ಜಿ.ಟಿ.ದೇವೇಗೌಡರ ವಿರುದ್ದ ಸೋಲು ಕಂಡ ನಂತರ ಸಿದ್ದರಾಮಯ್ಯ ಈ ಬಾರಿ ಅಲ್ಲಿ ಸ್ಪರ್ಧಿಸುವ ಇಚ್ಚೆಯಲ್ಲಿಲ್ಲ‌.
ಡಾ.ಯತೀಂದ್ರ ಪ್ರತಿನಿಧಿಸುವ ಪಕ್ಕದ ವರುಣ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಗುಸುಗುಸು ಮಾತುಗಳು ಕೇಳಿ ಬರುತ್ತಿದ್ದವು. ಸಿದ್ದರಾಮಯ್ಯನವರಿಗಾಗಿ ಕ್ಷೇತ್ರ ಬಿಟ್ಟು ಕೊಡಲು ಸಿದ್ದ ಎಂದು ಯತೀಂದ್ರ ಕೂಡಾ ಹೇಳಿದ್ದರು. ಆದರೆ, ಇಲ್ಲಿಂದ ಸಿದ್ದರಾಮಯ್ಯ ಸ್ಪರ್ಧಿಸುವುದಿಲ್ಲ ಎನ್ನಲಾಗಿದೆ.

ಇನ್ನು‌ ಕಳೆದ ಬಾರಿ ಗೆದ್ದ ಬಾದಾಮಿಯಲ್ಲಿ ಸ್ಪರ್ಧೆಗೆ ಕ್ಷೇತ್ರದ ಪ್ರಭಾವಿ ಕಾಂಗ್ರೆಸ್ ಮುಖಂಡ ಚಿಮ್ಮನಕಟ್ಟಿ ಸಿದ್ದರಾಮಯ್ಯನವರ ಸ್ಪರ್ಧೆಗೆ ವಿರೋಧವನ್ನು ಬಹಿರಂಗವಾಗಿಯೇ ವ್ಯಕ್ತ ಪಡಿಸಿದ್ದರು.ಇದರ ಜೊತೆಗೆ, ಹುಣಸೂರಿನಿಂದ ಸ್ಪರ್ಧಿಸಿ ಎಂದು ಹಾಲೀ ಕಾಂಗ್ರೆಸ್ ಶಾಸಕ ಎಚ್.ಪಿ.ಮಂಜುನಾಥ್ ಅವರು ಒತ್ತಾಯಿಸುತ್ತಿದ್ದಾರೆ. ಆದರೆ,ಇದ್ಯಾವ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಸ್ಪರ್ಧಿಸದೇ ಕೋಲಾರದಿಂದ ಸ್ಪರ್ಧಿಸಬಹುದು ಎನ್ನುವ ಮಾತು ಜೋರಾಗಿ ಕೇಳಿ ಬರುತ್ತಿದೆ.
ರಮೇಶ್ ಕುಮಾರ್ ಮತ್ತು ಕೆ.ಮುನಿಯಪ್ಪ ಬಣ ರಾಜಕೀಯ ಜೋರಾಗಿರುವ ಕೋಲಾರದಲ್ಲಿ ಸಿದ್ದರಾಮಯ್ಯನವರನ್ನು ನಿಲ್ಲಿಸಿ ಗೆಲ್ಲಿಸಿಕೊಂಡು ಬರುವುದನ್ನು ರಮೇಶ್ ಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.ಕೋಲಾರ ಕ್ಷೇತ್ರದಲ್ಲಿ ಎಸ್ ಸಿ, ಮುಸ್ಲಿಂ ಮತ್ತು ಕುರುಬ ಮತಗಳೇ ನಿರ್ಣಾಯಕ ಎನ್ನಲಾಗಿದೆ. ಇದರಿಂದ ಸಿದ್ದರಾಮಯ್ಯ ‌ಕೋಲಾರದಲ್ಲಿ ಸ್ಪರ್ಧೆ ಸಾಧ್ಯತೆ ಇದೆ.ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು