ಬೆಂಗಳೂರು;ಆರ್‌ಎಸ್‌ಎಸ್‌ಗೆ ಸೇರಿದ ಜನಸೇವಾ ಟ್ರಸ್ಟ್‌ಗೆ ಹಿಂದಿನ ಸರಕಾರ ನೀಡಿದ್ದ 35.33 ಎಕರೆ ಗೋಮಾಳ ಭೂಮಿ ಅನುದಾನವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ತಡೆಹಿಡಿದಿರುವ ಬಗ್ಗೆ ವರದಿಯಾಗಿದೆ.
ಹಿಂದಿನ ಬಿಜೆಪಿ ಸರ್ಕಾರವು ಆರ್ ಎಸ್‌ಎಸ್ ಗೆ ಸೇರಿದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರು ದಕ್ಷಿಣ ತಾಲೂಕಿನ ಕುರುಬರಹಳ್ಳಿ ಗ್ರಾಮದ ತಾವರಕೆರೆ ಹೋಬಳಿಯಲ್ಲಿ 35 ಎಕರೆ 33 ಗುಂಟೆ ಗೋಮಾಳ ಜಮೀನನನ್ನು ನೀಡಿತ್ತು.
ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಭೂಮಿ ಹಸ್ತಾಂತರಕ್ಕೆ ತಡೆ ನೀಡಿದೆ.
2023ರ ಮೇ.22 ರಂದು ಜಿಲ್ಲಾಧಿಕಾರಿ ಗೋಮಾಳ ಭೂಮಿಯನ್ನು ಜನಸೇವಾ ಟ್ರಸ್ಟ್ ಗೆ ಮಂಜೂರು ಮಾಡಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ರಾಜ್ಯ ಕಾಂಗ್ರೆಸ್ ಸರ್ಕಾರವು ಜನಸೇವಾ ಟ್ರಸ್ಟ್ ಗೆ 35 ಎಕರೆ, 33 ಗುಂಟೆ ಭೂಮಿ ಮಂಜೂರು ಮಾಡುವುದನ್ನು ತಡೆಹಿಡಿಯಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ವಿವಿಧ ಸಂಸ್ಥೆಗಳಿಗೆ ಸರ್ಕಾರಿ ಜಮೀನು ನೀಡಿರುವ ಕುರಿತು ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಮಂಜೂರು ಮಾಡುವುದನ್ನು ತಡೆಹಿಡಿಯಲಾಗಿದೆ ಎಂದು ಸಿಎಂ ಸೂಚನೆಯನ್ನು ಉಲ್ಲೇಖಿಸಿದ್ದಾರೆ.
ಸಿಎಂ ಸೂಚನೆ ಕೇವಲ ಜನಸೇವಾ ಟ್ರಸ್ಟ್‌ಗೆ ಮಾತ್ರ ಅನ್ವಯಿಸುವುದಿಲ್ಲ, ಆದರೆ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳಲ್ಲಿ ಮಾಡಿದ ಎಲ್ಲಾ ಹಂಚಿಕೆಗಳಿಗೆ ತಡೆಯಲಾಗಿದೆ ಎಂದು ಹೇಳಿದ್ದಾರೆ.