ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಅನುಮಾನ? ಏನಿದು ಬೆಳವಣಿಗೆ?

ನವದೆಹಲಿ:ಕರ್ನಾಟಕ ವಿಧಾನಸಭಾ ಚುನಾವಣೆ ಕಾವು ತಾರಕಕ್ಕೇರಿದ್ದು ಟಿಕೆಟ್ ಗಾಗಿ ಭಾರೀ ಫೈಟ್ ನಡೆಯುತ್ತಿದೆ.

ಈ ನಡುವೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದು ಅನುಮಾನ ಎನ್ನಲಾಗಿದೆ.

ಕೋಲಾರ ಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಅಲ್ಲಿ ಅದ್ದೂರಿ ಸಮಾವೇಶ, ರ್ಯಾಲಿ ಮಾಡಿದ್ದ ಸಿದ್ದರಾಮಯ್ಯ ಕ್ಷೇತ್ರದ ಬಗ್ಗೆ ಇನ್ನೂ ಗೊಂದಲ ಹೊಂದಿದ್ದಾರೆ ಎನ್ನಲಾಗಿದೆ.

ದೆಹಲಿಯಲ್ಲಿ ನಡೆದ ಸಿಇಸಿ ಸಭೆ ಬಳಿಕ ಸಿದ್ದರಾಮಯ್ಯ ಅವರು ನನ್ನ ಟಿಕೆಟ್ ಕ್ಲಿಯರ್ ಆಗಿಲ್ಲ.ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಮಾಡಲಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಕೋಲಾರ ಕ್ಷೇತ್ರ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ ಎಂದು ಕೂಡ ಹೇಳಲಾಗುತ್ತಿದೆ. ರಾಹುಲ್​ ಗಾಂಧಿ ಅವರು ಸಿದ್ದರಾಮಯ್ಯರಿಗೆ ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಕಾಂಗ್ರೆಸ್ ನ ಎಲ್ಲಾ ಅಭ್ಯರ್ಥಿಗಳ ಪಟ್ಟಿ ಸಿದ್ದವಾಗಿದೆ.ಶೀಘ್ರವೇ ಪಟ್ಟಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com