ಪ್ರಧಾನಿ ಮೋದಿ & ಸಚಿವೆ ನಿರ್ಮಾಲಾ ಸೀತಾರಾಮನ್ ಅವರನ್ನು ಭೇಟಿಯಾದ ಸಿದ್ದರಾಮಯ್ಯ

ನವದೆಹಲಿ:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದರು.

ಸಂಸತ್ ಭವನದಲ್ಲಿ ಸೌಹಾರ್ದಯುತ ಭೇಟಿ ವೇಳೆ ಪ್ರಧಾನಿ ಮೋದಿಗೆ ಶಾಲು ಹೊದಿಸಿ ಮೈಸೂರು ಪೇಟಾ ತೊಡಿಸಿದರು. ಜೊತೆಗೆ ಗಂಧದ ಮರದಿಂದ ಕೆತ್ತನೆ ಮಾಡಿದ ಮೈಸೂರು ದಸರಾ ಅಂಬಾರಿಯನ್ನು ನೀಡಿದರು.

ಬಳಿಕ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹಾಗೂ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಕೂಡ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ.

ಟಾಪ್ ನ್ಯೂಸ್