ಬೆಂಗಳೂರು;ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಶಾಸಕರಾಗಿ ಆಯ್ಕೆ ಆಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ.
ಹೈಕೋರ್ಟ್ ಗೆ ಸಲ್ಲಿಸಿರುವಂತ ಅರ್ಜಿಯಲ್ಲಿ ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಮತದಾರರಿಗೆ ಆಮಿಷ ಒಡ್ಡಲಾಗಿದೆ. ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನ್ 123(1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೂ ಮತದಾರರಿಗೆ ಗ್ಯಾರಂಟಿ ಕಾರ್ಡ್ ವಿತರಿಸಿ ಆಮಿಷ ಒಡ್ಡಲಾಗಿದೆ ಎಂಬುದಾಗಿ ಆರೋಪಿಸಲಾಗಿದೆ.
ಕೆ.ಎಂ ಶಂಕರ ಎಂಬುವರಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಲಾಗಿದ್ದು,ಸಿದ್ಧರಾಮಯ್ಯ ಆಯ್ಕೆ ಅಸಿಂಧುಗೊಳಿಸುವಂತೆ ಕೋರಲಾಗಿದೆ.
ಈ ಅರ್ಜಿ ವಿಚಾರಣೆ ನಡೆಸಿದಂತಹ ಹೈಕೋರ್ಟ್ ವಿಚಾರಣೆಯನ್ನು ಜುಲೈ.28ಕ್ಕೆ ಮುಂದೂಡಿದೆ ಎಂದು ವರದಿಯಾಗಿದೆ.