ನನ್ನ ಹತ್ಯೆಗೆ ಅಶ್ವಥ್ ನಾರಾಯಣ್ ಜನರನ್ನೇಕೆ ಪ್ರಚೋದಿಸುತ್ತಿದ್ದೀರಿ? ನೀವೇ ಕೋವಿ ಹಿಡಿದುಕೊಂಡು ಬನ್ನಿ; ಸಚಿವ ಅಶ್ವಥ್ ಹೇಳಿಕೆ ವೈರಲ್ ಬೆನ್ನಲ್ಲೇ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು;ಟಿಪ್ಪುವನ್ನು ಹೊಡೆದು ಹಾಕಿದ ರೀತಿ ಸಿದ್ದರಾಮಯ್ಯನನ್ನು ಹೊಡೆದು ಹಾಕಬೇಕೆಂದು ಹೇಳಿರುವ ಸಚಿವ ಅಶ್ವಥ್ ನಾರಾಯಣ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.

ಹೇಳಿಕೆ ಬಗ್ಗೆ ಸರಣಿ ಟ್ವೀಟ್ ನಲ್ಲಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಸಿದ್ದರಾಮಯ್ಯ,ಟಿಪ್ಪುವನ್ನು ಹೊಡೆದು ಹಾಕಿದಂತೆ ನನ್ನನ್ನೂ ಹೊಡೆದು ಹಾಕಬೇಕು ಎಂದು ಸಚಿವ ಅಶ್ವತ್ ನಾರಾಯಣ್ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ಹೇಳಿದ್ದಾರೆ.

ನನ್ನ ಹತ್ಯೆಗೆ ಅಶ್ವತ್ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ಸಚಿವ ಅಶ್ವತ್ ನಾರಾಯಣ್ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬೊಮ್ಮಯಿ ಮತ್ತು ಪ್ರಧಾನ ಮಂತ್ರಿ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ‌.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com