ನಿಷೇಧಾಜ್ಞೆ ಹಿನ್ನೆಲೆ;ಕೊಡಗು ಎಸ್ಪಿ ಕಚೇರಿ ಚಲೋ ಮುಂದೂಡಿಕೆ,ಸಿದ್ದರಾಮಯ್ಯ ಮನೆಗೆ ಬಿಗಿ ಭದ್ರತೆ,ಮೆಟಲ್ ಡಿಟೆಕ್ಟರ್ ಅಳವಡಿಕೆ
ಕೊಡಗು;ಕಾಂಗ್ರೆಸ್ ಹಮ್ಮಿಕೊಂಡಿದ್ದ ಕೊಡಗು ಪ್ರತಿಭಟನಾ ರ‍್ಯಾಲಿಯನ್ನು ಅನುಮತಿ ಸಿಗದ ಕಾರಣ ಮುಂದೂಡಲಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೊಡಗಿನಲ್ಲಿ 4 ದಿನಗಳ ಕಾಲ ನಿಷೇಧಾಜ್ಞೆ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ,ಮಡಿಕೇರಿ ಚಲೋ ಮಾಡಲು ಜಿಲ್ಲಾಧಿಕಾರಿ,ಎಸ್‌ಪಿ ಅನುಮತಿ ಕೊಟ್ಟಿಲ್ಲ.ಇದರಿಂದ ಮಡಿಕೇರಿ ಚಲೋ ಮುಂದೂಡುತ್ತೇವೆ.ಕಾನೂನು ಉಲ್ಲಂಘನೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.ಜಿಲ್ಲಾಧಿಕಾರಿ ಅವರ ಆದೇಶ ಅಂದರೆ ಅದು ಸರ್ಕಾರದ ಆದೇಶ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ
ವಿಪಕ್ಷ ನಾಯಕ,ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ,ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ.
ಶಿವಾನಂದ ಸರ್ಕಲ್ ಬಳಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು,ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ.