ರಾಜ್ಯದಲ್ಲಿ ಎನ್ ಇಪಿ ರದ್ಧತಿ ಕುರಿತು ಮಹತ್ವದ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ರದ್ದು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಕೆಪಿಸಿಸಿ ಸಭೆಯಲ್ಲಿ ಮಾತನಾಡಿದ ಹಿರಿಯ ನಾಯಕ ರೆಹಮಾನ್ ಖಾನ್, ಆರ್‌ಎಸ್‍ಎಸ್ ಕಾರ್ಯಸೂಚಿಯ ಭಾಗವಾಗಿರುವ ಎನ್‍ಇಪಿಯನ್ನು ರಾಜ್ಯದಲ್ಲಿ ಕೈಬಿಡಬೇಕು ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷದಿಂದ ಎನ್‍ಇಪಿ ರದ್ದು ಮಾಡುತ್ತೇವೆ. ಸಂವಿಧಾನಕ್ಕೆ ಪೂರಕವಾದ ಶಿಕ್ಷಣ ನೀತಿಯನ್ನು ಜಾರಿ ಮಾಡುತ್ತೇವೆ ಎಂದು ಹೇಳಿದ್ದಾರೆ.

ಎನ್‍ಇಪಿಗೆ ಎಲ್ಲರಿಂದ ವಿರೋಧವಿದ್ದು,ಬಿಜೆಪಿ ಅಧಿಕಾರದಲ್ಲಿರುವ ಇತರೆ ರಾಜ್ಯಗಳಲ್ಲೇ ಇದು ಅನುಷ್ಠಾನಕ್ಕೆ ಬಂದಿಲ್ಲ.ಆದರೆ ಕರ್ನಾಟಕದಲ್ಲಿ ಮಾತ್ರ ತರಾತುರಿಯಲ್ಲಿ ಅನುಷ್ಠಾನಕ್ಕೆ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಟಾಪ್ ನ್ಯೂಸ್