ಬೆಂಗಳೂರು: ಪ್ರವೀಣ್ ನೆಟ್ಟಾರು ಪತ್ನಿಗೆ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ಉದ್ಯೋಗಕ್ಕೆ ಮರು ನೇಮಕ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಪತ್ನಿ ನೂತನ ಅವರಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೇಮಕಾತಿ ರದ್ದಾಗಿತ್ತು.ಈ ಹಿಂದಿನ ಬಿಜೆಪಿಯ ಬೊಮ್ಮಯಿ ಸರಕಾರ ತಾತ್ಕಾಲಿಕ ನೇಮಕಾತಿ ಮಾಡಿರುವುದು ಇದಕ್ಕೆ ಕಾರಣವಾಗಿತ್ತು.
ಈ ಕುರಿತು ಮಾದ್ಯಮಗಳು ವರದಿ ಮಾಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ನೂತನ ಆದೇಶ ಮಾಡಿದ್ದಾರೆ.ಈ ಮೊದಲು ಜಿಲ್ಲಾಧಿಕಾರಿ ಅವರು ಸರಕಾರ ಬದಲಾದಾಗ ಇದೊಂದು ಸಾಮಾನ್ಯ ಪ್ರಕ್ರಿಯೆ ಎಂದು ಹೇಳಿದ್ದರು.ಮನವಿ ಸಲ್ಲಿಸಿದರೆ ಸರಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದ್ದರು.
ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ.
ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರನ್ನು ಮರು ನೇಮಕ ಮಾಡಲಾಗುವುದು ಎಂದು ಹೇಳಿದ್ದಾರೆ.