ಆಲಿ ಬಾಬ ಮತ್ತು 40 ಕಳ್ಳರಲ್ಲಿ ಸಚಿವ ಸುಧಾಕರ್ ಒಬ್ಬ; ಸಿದ್ದರಾಮಯ್ಯ

ಬೆಂಗಳೂರು;ಆಲಿಬಾಬಾ ಮತ್ತು ಈ 40 ಕಳ್ಳರು ಇದ್ದಾರಲ್ಲ? ಹಾಗೇ ಈ ಬಿಜೆಪಿಯವರು. ಅದರಲ್ಲಿ ಈ ಸುಧಾಕರ್ ಕೂಡ ಒಬ್ಬ ಎಂದು ಸಿದ್ದರಾಮಯ್ಯ ಸಚಿವ ಡಾ.ಸುಧಾಕರ್ ವಿರುದ್ಧ ಕಿಡಿಕಾರಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಮೂರು ಸಾವಿರ ಕೋಟಿ ಭ್ರಷ್ಟಾಚಾರ ಮಾಡಿದ್ದಾರೆ. ಅದರ ಮಾಸ್ಟರ್ ಡಾ. ಕೆ ಸುಧಾಕರ್ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ವಿಶೇಷ ಆಡಿಟ್ ಆಗಬೇಕು ಎಂದು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷ ಎಚ್ ಕೆ ಪಾಟೀಲ್ ಹೇಳಿದ್ದಾರೆ
ಆದರೆ ವಿಶೇಷ ಅಡಿಟ್ ಮಾಡಿಲ್ಲ. ವಿಶೇಷ ಅಡಿಟ್‌ಗೆ ಅವಕಾಶವಿಲ್ಲ ಎಂದು ಆರೋಗ್ಯ ಇಲಾಖೆ ಆಯುಕ್ತ ಜಾವೇದ್ ಅಕ್ತರ್ ಹೇಳಿದ್ದಾರೆ. ಒಂದು ವೇಳೆ ಭ್ರಷ್ಟಾಚಾರ ಆಗಿರದಿದ್ದರೆ ಸ್ಪೆಶಲ್ ಅಡಿಟ್ ಮಾಡಿಸಲು ಯಾಕೆ ಒಪ್ಪಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಆರೋಗ್ಯ ಸಚಿವ ಡಾ ಕೆ ಸುಧಾಕರ್ ಎಂಬಿಬಿಎಸ್ ಓದ್ಕೊಂಡಿದ್ದಾರೆ ಅಂದ್ಕೊಂಡಿದ್ದೆ, ನಮ್ಮ ಪಕ್ಷದಿಂದಲೇ 2013ರಲ್ಲಿ ಸುಧಾಕರ್ ಅವರಿಗೆ ಟಿಕೆಟ್ ಕೊಟ್ಟಿದ್ದೆವು ಎಂದ ಸಿದ್ದರಾಮಯ್ಯ, ಈಗ ಸುಧಾಕರ್ ಆಪರೇಶನ್ ಕಮಲದ ಮೂಲಕ ಬಿಜೆಪಿಗೆ ಹೋಗಿ ಮಂತ್ರಿಯಾಗಿದ್ದಾರೆ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರು; ಮದುವೆಯಾಗಿ ಪತಿ ಮನೆಗೆ ಹೋದ ಯುವತಿ, ಮೊದಲ ದಿನವೇ ಲಿಪ್ ಸ್ಟಿಕ್ ಹಾಕಿ ನನಗೂ ಗಂಡು ಬೇಕು ಎಂದ ವರ! ಕಂಗಾಲಾಗಿ ಪೊಲೀಸರಿಗೆ ದೂರು‌ ನೀಡಿದ ಯುವತಿ

ಬೆಂಗಳೂರು:ಪತಿ ಮಹಿಳೆಯರಂತೆ ಲಿಪ್ ಸ್ಟಿಕ್ ಹಾಕುತ್ತಾನೆ, ತನ್ನ ಒಳ ಉಡುಪು ಧರಿಸುತ್ತಾನೆ ಎಂದು

BIG NEWS ಜಾನುವಾರ ಸಾಗಾಟ ಮಾಡುತ್ತಿದ್ದ ವ್ಯಕ್ತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ, ವಾಹನ ತಡೆದು ಜಾನುವಾರ ರಕ್ಷಿಸಿದ್ದ ಪುನೀತ್ ಕೆರೆಹಳ್ಳಿ ಟೀಂ! ಸಂತ್ರಸ್ತ ಕುಟುಂಬದಿಂದ ಪುನೀತ್ ಕೆರೆಹಳ್ಳಿ ಬಂಧಿಸುವಂತೆ ಪ್ರತಿಭಟನೆ

ರಾಮನಗರ:ಕಸಾಯಿಖಾನೆಗೆ ಜಾನುವಾರು ಸಾಗಣೆ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ದಾಳಿ ಮಾಡಿ ಜಾನುವಾರ ವಶಪಡಿಸಿಕೊಂಡಿದ್ದಾರೆ

Developed by eAppsi.com