ಮಂಗಳೂರು:ಉಡುಪಿ ವಿಡಿಯೊ ಪ್ರಕರಣವನ್ನು ಡಿವೈಎಸ್ಪಿ ಮಟ್ಟದ ಅಧಿಕಾರಿ ತನಿಖೆ ಮಾಡುತ್ತಿದ್ದು, ಇದರಿಂದಾಗಿ ಪ್ರಕರಣವನ್ನು ಎಸ್‌ಐಟಿಗೆ ವಹಿಸುವ ಪ್ರಶ್ನೆ ಇಲ್ಲ ಎಂದು
ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವಿಡಿಯೋ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸುಮೋಟೋ ಪ್ರಕರಣವನ್ನು ದಾಖಲಿಸಿ ಎಫ್ ಐ ಆರ್ ಆಗಿದೆ.ಕೇಂದ್ರ ಮಹಿಳಾ ಆಯೋಗದ ಸದಸ್ಯರು ಆಗಮಿಸಿ ತನಿಖೆ ಕೈಗೊಂಡು ಕಾಲೇಜಿನ ಶೌಚಾಲಯದಲ್ಲಿ ಕ್ಯಾಮರಾ ಇರಲಿಲ್ಲ ಎಂದು ಹೇಳಿದ್ದಾರೆ.ತನಿಖೆಯಾಗಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಈ ಪ್ರಕರಣವನ್ನು ಮಕ್ಕಲಾಟಿಕೆ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ಮಕ್ಕಳಾಟಿಕೆಯಾಗಿದ್ದರೆ ಪ್ರಕರಣ ದಾಖಲಾಗುತ್ತಿತ್ತೆ?ಕಾಲೇಜಿನ ವಿದ್ಯಾರ್ಥಿಗಳು ತಮಾಷೆ ಮಾಡಿರಬಹುದು ಎಂದಿರಬಹುದು.ಪ್ರಕರಣ ದಾಖಲಾಗಿದ್ದು, ಎಫ್.ಐ.ಆರ್.ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.