ಸಿಎಂ ಸಿದ್ದರಾಮಯ್ಯ ಅವರ ಪತ್ನಿಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು

ಬೆಂಗಳೂರು;ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಅನಾರೋಗ್ಯದಿಂದ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.

ನಿನ್ನೆ ರಾತ್ರಿ 11.30 ರ ಸುಮಾರಿಗೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಜ್ವರದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಸಿಎಂ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.ಇಂದು ಬೆಳಗ್ಗೆ 9.50 ಕ್ಕೆ ದೆಹಲಿಗೆ ತೆರಳಬೇಕಿತ್ತು.

ಆದರೆ ಪತ್ನಿ ಅನಾರೋಗ್ಯದ ಹಿನ್ನೆಲೆಯಲ್ಲಿ ದೆಹಲಿಗೆ ತೆರಳುವ ಮುನ್ನ ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಲಿದ್ದಾರೆ. ಬಳಿಕ 11.30 ಕ್ಕೆ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್