ಬೆಂಗಳೂರು; ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಆಯ್ಕೆಯಾಗಿದ್ದು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.
ಭಾರೀ ಜಿದ್ದಾ ಜಿದ್ದಿನ ಸಿಎಂ ಪೈಟ್ ನಲ್ಲಿ ಕೊನೆಗೆ ಸಿದ್ದರಾಮಯ್ಯಗೆ ಗೆಲುವಾಗಿದೆ.ಶನಿವಾರ ಮಧ್ಯಾಹ್ನ 12.30ಕ್ಕೆ ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಕೆಲವರು ಸಚಿವರಾಗಿ ಸಂಪುಟ ಸೇರಲಿದ್ದಾರೆ ಎಂದು ತಿಳಿದು ಬಂದಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಮಂತ್ರಿಗಳಾದವರೇ ವಾಪಸ್ ಸಚಿವರಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕರು ಹೊಸ ಪ್ರಯೋಗಕ್ಕೆ ಕೈ ಹಾಕುವ ಸಾಧ್ಯತೆ ಕೂಡ ಇದೆ. ಬಿಜೆಪಿಯಿಂದ ಬಂದಿರುವ ಲಕ್ಷ್ಮಣ್ ಸವದಿಗೂ ಕೂಡ ಕ್ಯಾಬಿನೆಟ್‌ನಲ್ಲಿ ಸ್ಥಾನ ಸಿಗುವ ಸಾಧ್ಯತೆ ಇದ್ದು, ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿ ಬೆಳಗಾವಿ ಜಿಲ್ಲೆಗೆ ಮೂರು ಸಚಿವ ಸ್ಥಾನಗಳು ಸಿಗುವ ಸಾಧ್ಯತೆ ಇದೆ.
ಸಾಂಭವ್ಯ ಸಚಿವರ ಪಟ್ಟಿ ಈ ಕೆಳಗಿನಂತಿದೆ.
ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಹೆಚ್.ಸಿ.ಮಹದೇವಪ್ಪ, ಟಿ.ಬಿ.ಜಯಚಂದ್ರ,ಕೃಷ್ಣಭೈರೇಗೌಡ,
ಪ್ರಿಯಾಂಕ್ ಖರ್ಗೆ,
ಡಾ.ಜಿ.ಪರಮೇಶ್ವರ್,ಲಕ್ಷ್ಮಿ ಹೆಬ್ಬಾಳ್ಕರ್,ಎಸ್.ಎಸ್.ಮಲ್ಲಿಕಾರ್ಜುನ್, ಚೆಲುವರಾಯಸ್ವಾಮಿ,ಸತೀಶ್ ಜಾರಕಿಹೊಳಿ
ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್
ಪುಟ್ಟರಂಗ ಶೆಟ್ಟಿ, ಯು.ಟಿ.ಖಾದರ್, ಜಮೀರ್ ಅಹಮ್ಮದ್, ಲಕ್ಷ್ಮಣ್ ಸವದಿ,ಆರ್.ವಿ.ದೇಶಪಾಂಡೆ,ಈಶ್ವರ್ ಖಂಡ್ರೆ,ಬಿ.ಕೆ.ಹರಿಪ್ರಸಾದ್,ಬಿ ಕೆ ಸಂಗಮೇಶ್, ಕೆ.ಎಚ್.ಮುನಿಯಪ್ಪ, ಹೆಚ್ ಕೆ.ಪಾಟೀಲ್, ತುಕರಾಂ,
ರುದ್ರಪ್ಪ ಲಮಾಣಿ ಅವರು ಸಿದ್ದು ಸರಕಾರದ ಸಚಿವರಾಗುವ ಸಾಧ್ಯತೆ ಇದೆ.
ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದಲ್ಲಿ ಕಾಂಗ್ರೆಸ್ ಈ ಬಾರಿ ಭರ್ಜರಿ ಜಯ ಸಾಧಿಸಿದೆ. 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಹೊಸ ಸರಕಾರ ರಚನೆಗೆ ಮುಂದಾಗಿದೆ.