‘ಸಿದ್ದು ನಿಜ ಕನಸುಗಳು’ ಎಂದು ಪುಸ್ತಕ ರೆಡಿ ಮಾಡಿದ ಬಿಜೆಪಿ; ಕಾಂಗ್ರೆಸ್ ನಿಂದ ದೂರು

ಬೆಂಗಳೂರು:ಬಿಜೆಪಿ ‘ಸಿದ್ದು ನಿಜ ಕನಸುಗಳು’ ಎಂಬ ಶೀರ್ಷಿಕೆಯಡಿ ಬಿಜೆಪಿ ಬೆಂಗಳೂರಿನಲ್ಲಿ ಪುಸ್ತಕ ಬಿಡುಗಡೆಗೆ ಸಿದ್ಧತೆ ನಡೆಸಿದ್ದು ಇದನ್ನು ತಡೆಯುವಂತೆ ಎಸ್ಜೆ ಪಾರ್ಕ್ ಪೊಲೀಸ್ ಠಾಣೆಗೆ ಕಾಂಗ್ರೆಸ್ ದೂರು ನೀಡಿದೆ.

ಕೆಪಿಸಿಸಿ ವಕ್ತಾರ ಹಾಗೂ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಈ ಕುರಿತು ದೂರು ಸಲ್ಲಿಸಿದ್ದಾರೆ.

ಪುಸ್ತಕ ಬಿಡುಗಡೆ ಹಿಂದೆ ದುರುದ್ದೇಶವಿದೆ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಕಾರ್ಯಕ್ರಮವನ್ನು ರದ್ದು ಮಾಡಲು ಆಯೋಜಕರಿಗೆ ಸೂಚನೆ ನೀಡಿ ಎಂದು ದೂರಿನಲ್ಲಿ ಆಗ್ರಹಿಸಲಾಗಿದೆ.

ಸಿದ್ದು ನಿಜ ಕನಸು ಪುಸ್ತಕವನ್ನು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ ಪುಸ್ತಕ ಬಿಡುಗಡೆ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿದ್ದ ಸಚಿವ ಅಶ್ವತ್ಥ್ ನಾರಾಯಣ “ಸಿದ್ದು ನಿಜ ಕನಸುಗಳು” ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನ ಎಂದು ಬರೆದಿದ್ದರು.

ಟಾಪ್ ನ್ಯೂಸ್