“ಸಿದ್ದು ನಿಜ ಕನಸುಗಳು” ಪುಸ್ತಕ ಬಿಡುಗಡೆಗೆ ಕೋರ್ಟ್ ನಿಂದ ತಡೆ; ಪುಸ್ತಕದ ಬಗ್ಗೆ ಮಾತನಾಡಲು ನಿರಾಕರಿಸಿದ ಸಿಎಂ‌ ಬೊಮ್ಮಯಿ!

ಬೆಂಗಳೂರು;’ಸಿದ್ದು ನಿಜಕನಸುಗಳು’ ಎಂಬ ಪುಸ್ತಕವನ್ನು ಲೋಕಾರ್ಪಣೆ ಮಾಡದಂತೆ ಸಿಟಿ ಸಿವಿಲ್ ಕೋರ್ಟ್ ಮಧ್ಯಂತರ ತಡೆಯಾಜ್ಞೆ ಹೊರಡಿಸಿ ಆದೇಶಿಸಿದೆ.

ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯ ‘ಸಿದ್ದು ನಿಜಕನಸುಗಳು’ ಪುಸ್ತಕ ಬಿಡುಗಡೆಯಾಗದಂತೆ ಕೋರ್ಟ್​​ಗೆ ತಡೆಯಾಜ್ಞೆ ಅರ್ಜಿ ಸಲ್ಲಿಸಿದ್ದರು.

ಬಿಜೆಪಿ ಹೊರತರಲು ನಿರ್ಧರಿಸಿದ್ದ ಪುಸ್ತಕವನ್ನು ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಲೋಕಾರ್ಪಣೆಗೊಳಿಸಬೇಕಿತ್ತು. ‘ಸಿದ್ದು ನಿಜಕನಸುಗಳು’ ಎಂಬ ಪುಸ್ತಕದ ಮೂಲಕ ಹಲವು ಸೂಕ್ಷ್ಮ ವಿಷಯಗಳನ್ನು ಬಹಿರಂಗಪಡಿಸುವ ಜತೆ ಹಲವು ಪ್ರಶ್ನೆಗಳಿಗೆ ಉತ್ತರ ಹುಡುಕಿ ಕೊಡುವ ಪ್ರಯತ್ನವನ್ನು ಶ್ಲಾಘಿಸುತ್ತೇನೆ ಎಂದು ಅವರು ಹೇಳಿಕೊಂಡಿದ್ದರು.

ಇನ್ನು ‘ಸಿದ್ದು ನಿಜ‌ಕನಸುಗಳು’ ಪುಸ್ತಕ ಬಿಡುಗಡೆ ಬಗ್ಗೆ ಪತ್ರಕರ್ತರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಪ್ರಶ್ನಿಸುತ್ತಿದ್ದಂತೆ ಉತ್ತರಿಸಲು ಸಿಎಂ ನಿರಾಕರಿಸಿದ್ದಾರೆ.

ಟಾಪ್ ನ್ಯೂಸ್