BIG NEWS ಮಾಜಿ ಸಿಎಂ‌ ಸಿದ್ದರಾಮಯ್ಯ ಸಹೋದರ ವಿಧಿವಶ

ಮೈಸೂರು;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಕಿರಿಯ ಸಹೋದರ ರಾಮೇಗೌಡ ನಿಧನರಾಗಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಿಡ್ನಿವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.

ಸಿದ್ದರಾಮಯ್ಯನವರ ಕೊನೆಯ ತಮ್ಮನಾಗಿರುವ ರಾಮೇಗೌಡರಿಗೆ 64 ವರ್ಷ ವಯಸ್ಸಾಗಿತ್ತು.

ಕಳೆದ ಕೆಲವು ದಿನಗಳಿಂದಲೂ ಕಿಡ್ನಿವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ದ ರಾಮೇಗೌಡರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.ಗುರುವಾರ ಮೈಸೂರಿಗೆ ತೆರಳಿದ್ದ ಸಿದ್ದರಾಮಯ್ಯ ಆಸ್ಪತ್ರೆಗೆ ತೆರಳಿ ತಮ್ಮ ಸಹೋದರನ ಆರೋಗ್ಯ ವಿಚಾರಿಸಿದ್ದರು.

ಇನ್ನು ಸಿದ್ದರಾಮನಹುಂಡಿಯಲ್ಲಿ ರಾಮೇಗೌಡರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ತದನಂತರ ಸ್ವಗ್ರಾಮದಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ.

ಟಾಪ್ ನ್ಯೂಸ್