ಪುತ್ರ ದಿ.ರಾಕೇಶ್ ಸಮಾಧಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು;ಸಿಎಂ ಸಿದ್ದರಾಮಯ್ಯ ಅವರು ಟಿ.ಕಾಟೂರು ಬಳಿ ಇರುವ ತಮ್ಮ ತೋಟದಲ್ಲಿ ಪುತ್ರ ದಿ.ರಾಕೇಶ್‌ ಅವರ 7ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಸಮಾಧಿಗೆ ಪೂಜೆ ಸಲ್ಲಿಸಿದರು.

ದಿ.ರಾಕೇಶ್‌ ಅವರು 2016ರಲ್ಲಿ ಅಕಾಲಿಕ ಮರಣ ಹೊಂದಿದ್ದು, ನಂತರ ಪ್ರತಿವರ್ಷ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ.

ಈ ವೇಳೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಮ್ಮ, ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ, ರಾಕೇಶ್‌ ಪತ್ನಿ ಸ್ಮಿತಾ ರಾಕೇಶ್‌, ಮಕ್ಕಳಾದ ಧವನ್‌ ರಾಕೇಶ್‌, ತನ್ಮಯಿ ರಾಕೇಶ್‌, ಸಿದ್ದರಾಮಯ್ಯ ಅವರ ಸಹೋದರ ಸಿದ್ದೇಗೌಡ ಕೂಡ ಹಾಜರಿದ್ದು, ಸಮಾಧಿಗೆ ಪೂಜೆ ಸಲ್ಲಿಸಿದರು.

ಇದೇ ವೇಳೆ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಅಹಿಂದ ಸಂಘಟನೆ ವತಿಯಿಂದ ದಿ.ರಾಕೇಶ್‌ ಸಿದ್ದರಾಮಯ್ಯ ಅವರ ಸ್ಮರಣಾರ್ಥವಾಗಿ ಮೈಸೂರು ತಾಲೂಕು ವರುಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಚಿತವಾಗಿ ತಟ್ಟೆಮತ್ತು ಲೋಟಗಳನ್ನು ವಿತರಿಸಲಾಯಿತು.

ಟಾಪ್ ನ್ಯೂಸ್