ಅಸ್ಸಾಂ;ಅಸ್ಸಾಂನ ನಾಗಾನ್ ಪ್ರದೇಶದಲ್ಲಿ ಸಂಜೆ 4 ಗಂಟೆ 18 ನಿಮಿಷಕ್ಕೆ ಭೂಕಂಪನ ಉಂಟಾಗಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 4ರಷ್ಟು ತೀವ್ರತೆ ದಾಖಲಾಗಿದೆ.
ಸಿಕ್ಕಿಂನ ಯುಕ್ಸೋಮ್ ಸುತ್ತಮುತ್ತ ಇಂದು ಮುಂಜಾನೆ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ರಷ್ಟು ತೀವ್ರತೆ ದಾಖಲಾಗಿದೆ.
ಸಿಕ್ಕಿಂನ ಯುಕ್ಸೋಮ್ನ ವಾಯುವ್ಯಕ್ಕೆ 70 ಕಿ.ಮೀ ದೂರದಲ್ಲಿ ಇಂದು ಮುಂಜಾನೆ 4.15 ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ ಅಸ್ಸಾಂನಲ್ಲಿ ಸಂಭವಿಸಿದ ಎರಡನೇ ಭೂಕಂಪ ಇದಾಗಿದೆ.