ತಾಯಿ ಕೆಲಸಕ್ಕೆ ಹೋದಾಗ ಮನೆಯಲ್ಲಿ ಇಬ್ಬರು ಹೆಣ್ಣುಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ; ಶಾಕಿಂಗ್ ಘಟನೆ

ತಾಯಿ ಕೆಲಸಕ್ಕೆ ಹೋದಾಗ ಮನೆಯಲ್ಲಿ ಇಬ್ಬರು ಹೆಣ್ಣುಮಕ್ಕಳು ನೇಣು ಬಿಗಿದುಕೊಂಡು ಆತ್ಮಹತ್ಯೆ; ಶಾಕಿಂಗ್ ಘಟನೆ

ಹುಬ್ಬಳ್ಳಿ:ಅಕ್ಕ & ತಂಗಿ ಇಬ್ಬರು ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ಇಂದು ನಡೆದಿದೆ.

ಕಾವೇರಿ ಹಡಪದ (17) ಮತ್ತು ಭೂಮಿಕಾ ಹಡಪದ (19) ಆತ್ಮಹತ್ಯೆ ಮಾಡಿಕೊಂಡ ಸಹೋದರಿಯರು ಎಂದು ಗುರುತಿಸಲಾಗಿದೆ.

ಮನೆಯಲ್ಲಿ ತಾಯಿ ಇಲ್ಲದ ವೇಳೆ ಇಬ್ಬರೂ ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ ಮನೆಯಲ್ಲಿ ಇವರು ತಾಯಿಯ ಜೊತೆ ವಾಸವಾಗಿದ್ದರು. ತಾಯಿ‌ ಕೆಲಸಕ್ಕೆಂದು ಹೊರಗಡೆ ಹೋದಾಗ ಸೀರೆಯಿಂದ ನೇಣು ಬಿಗಿದುಕೊಂಡು ಅಕ್ಕ ಮತ್ತು ತಂಗಿ ಇಬ್ಬರೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಬಗ್ಗೆ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್