ಪುತ್ತೂರು; ಮಾಜಿ ಶಾಸಕ ಸಂಜೀವ ಮಠಂದೂರ್ ಗೆ ಹಾವು ಕಡಿತ

ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ಅವರು ವಿಷ ಹಾವು ಕಡಿತಕ್ಕೊಳಗಾಗಿದ್ದು ಪುತ್ತೂರು ಆಸ್ಪತ್ರೆಗೆ ದಾಖಲಾಗಿದ್ದಾರೆ

ಸದ್ಯ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಬಿಜೆಪಿಯ ಹಿರಿಯ ನಾಯಕರು, ಮುಖಂಡರುಗಳು ಆಸ್ಪತ್ರೆಗೆ ಧಾವಿಸಿದ್ದಾರೆ.

ಹಿರೇಬಂಡಾಡಿಯಲ್ಲಿರುವ ತನ್ನ ಮನೆಯ ತೋಟದಲ್ಲಿ ನಿಂತಿರುವ ಸಂದರ್ಭದಲ್ಲಿ ವಿಷಪೂರಿತ ಕನ್ನಡಿ ಹಾವು ಅವರ ಕಾಲಿಗೆ ಕಚ್ಚಿದೆ.

ತಕ್ಷಣವೇ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ತೊಂದರೆಯಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ

ಟಾಪ್ ನ್ಯೂಸ್