ಮಂಗಳೂರು;ಮಂಗಳೂರು ಮೂಲದ ಯೋಧನೋರ್ವ ಭೋಪಾಲ್ ನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ.
ಸಶಸ್ತ್ರ ಸೀಮಾ ಬಲ್ ದಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಳೀಧರ ರೈ(37) ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮಧ್ಯಪ್ರದೇಶದಿಂದ ಅವರ ಪಾರ್ಥೀವ ಶರೀರ
ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ವಿಮಾನ ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ.