ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡದೆ ಹೋದರೆ ಮುಂದಿನ ತೀರ್ಮಾನ ಕೈಗೊಳ್ಳುವೆ-ಮಾಜಿ ಸಚಿವ ಸೋಮಣ್ಣ

ಬೆಂಗಳೂರು: ನನಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಮಾನ ನೀಡದೇ ಹೋದರೆ ಕಾರ್ಯಕರ್ತರ ಅಭಿಪ್ರಾಯದ ಮೇರೆಗೆ ಮುಂದಿನ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.

ವಿಜಯನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 365 ದಿನವೂ ಜನರ ನಡುವೆ ಇದ್ದು, ಜನ ಸಂಘಟನೆ ಮಾಡಿದ ಅನುಭವವಿದೆ. ಆದ್ದರಿಂದ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಮಾನ ಕೊಡಿ ಎಂದು ಕೇಳಿದ್ದೇನೆ ಎಂದು ಹೇಳಿದ್ದಾರೆ.

ಕಳೆದ 40 ವರ್ಷಗಳಿಂದ ರಾಜ್ಯ ರಾಜಕಾರಣದ ಆಗುಹೋಗು ನನಗೆ ಗೊತ್ತು. ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಹಗಲಿರುಳು ಪಕ್ಷಕ್ಕಾಗಿ ಶ್ರಮಿಸುವೆ. ಕೊಡದೇ ಹೋದರೆ ಕಾರ್ಯಕರ್ತರ ಸಭೆ ಕರೆದು ಮುಂದಿನ ತೀರ್ಮಾನ ಪ್ರಕಟ ಮಾಡುತ್ತೇನೆ ಎಂದು ಸೋಮಣ್ಣ ಹೇಳಿದ್ದಾರೆ.

ಬಿಜೆಪಿ ಹೈಕಮಾಂಡ್ ಮಾತಿಗೆ ಗೌರವ ನೀಡಿ ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸಿದೆ. ಗೋವಿಂದರಾಜನಗರ ಕ್ಷೇತ್ರದಲ್ಲಿ ನನಗೆ ಬಿಜೆಪಿಯಲ್ಲಿ ಗೆಲುವು ಸುಲಭವಾಗಿತ್ತು ಎಂದು ಸೋಮಣ್ಣ ಹೇಳಿದ್ದಾರೆ.

ಟಾಪ್ ನ್ಯೂಸ್