ಹರ್ಯಾಣಿ ಹಾಡುಗಳಿಗೆ ಹೆಜ್ಜೆ ಹಾಕಿದ ಸೋನಿಯಾ ಗಾಂಧಿ; ವಿಡಿಯೋ ವೈರಲ್..

ನವದೆಹಲಿ;ಸೋನಿಯಾ ಗಾಂಧಿ ಮತ್ತು ಅವರ ಪುತ್ರಿ ಪ್ರಿಯಾಂಕಾ ಗಾಂಧಿ ಹರ್ಯಾಣಿ ಹಾಡುಗಳಿಗೆ ಹೆಜ್ಜೆ ಹಾಕಿದ ವಿಡಿಯೋ ವೈರಲ್ ಆಗಿದೆ.

ಹರ್ಯಾಣದ ಸೋನೆಪತ್‌ನಿಂದ ಕೆಲವು ಮಹಿಳೆಯರನ್ನು ದೆಹಲಿಗೆ ಆಹ್ವಾನಿಸಲಾಗಿದ್ದು, ಅವರ ಜೊತೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ಹಾಗೂ ರಾಹುಲ್‌ ಗಾಂಧಿ ಮಾತುಕತೆ ನಡೆಸಿದ್ದಾರೆ.

ದೆಹಲಿಯಲ್ಲಿರುವ ಪ್ರಿಯಾಂಕಾ ಗಾಂಧಿ ನಿವಾಸಕ್ಕೆ ಆಗಮಿಸಿದ ಈ ಮಹಿಳೆಯರು ಸೋನಿಯಾ, ಪ್ರಿಯಾಂಕಾ ಹಾಗೂ ರಾಹುಲ್‌ ಅವರೊಂದಿಗೆ ಭೋಜನ ಕೂಟದಲ್ಲೂ ಭಾಗಿಯಾಗಿದ್ದಾರೆ.ಬಳಿಕ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕ ಅವರ ಜೊತೆ ಹರ್ಯಾಣಿ ಹಾಡುಗಳಿಗೆ ಹೆಜ್ಜೆ ಹಾಕಿದ್ದಾರೆ.

ಟಾಪ್ ನ್ಯೂಸ್