ನವದೆಹಲಿ;ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪಾವೊಲಾ ಮೈನೊ ಇಟಲಿಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ‘ಶ್ರೀಮತಿ ಸೋನಿಯಾ ಗಾಂಧಿ ಅವರ ತಾಯಿ ಶ್ರೀಮತಿ ಪಾವೊಲಾ ಮೈನೊ ಅವರು 2022ರ ಆಗಸ್ಟ್ 27ರ ಶನಿವಾರದಂದು ಇಟಲಿಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಹೇಳಿದ್ದಾರೆ.
ಆಗಸ್ಟ್ 24ರಂದು ಕಾಂಗ್ರೆಸ್ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಸೋನಿಯಾ ಗಾಂಧಿ ಅವರು ತಮ್ಮ ಮಗ ರಾಹುಲ್ ಗಾಂಧಿ ಮತ್ತು ಮಗಳು ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಿದೇಶಕ್ಕೆ ಹೋಗಲಿದ್ದಾರೆ ಎಂದು ಹೇಳಿತ್ತು.
ನವದೆಹಲಿಗೆ ಮರಳುವ ಮೊದಲು ಸೋನಿಯಾ ತಮ್ಮ ಅನಾರೋಗ್ಯ ಪೀಡಿತ ತಾಯಿಯನ್ನ ಸಹ ಭೇಟಿಯಾಗಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿತ್ತು.