ದಕ್ಷಿಣ ಕನ್ನಡ ಜಿಲ್ಲಾ SP ಕಚೇರಿ ಪುತ್ತೂರಿಗೆ ಸ್ಥಳಾಂತರ?

ಮಂಗಳೂರು;ಗೃಹ ಸಚಿವರಾದ ಡಾ.ಜಿ ಪರಮೇಶ್ವರ್ ಅವರು ಇಂದು ಮಂಗಳೂರಿಗೆ ಆಗಮಿಸಿದ್ದಾರೆ‌.ಈ ವೇಳೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಎಸ್ಪಿ ಕಚೇರಿಯನ್ನು ಪುತ್ತೂರಿಗೆ ಸ್ಥಳಾಂತರಿಸುವಂತೆ ಗೃಹ ಸಚಿವರನ್ನು ಆಗ್ರಹಿಸಿದ್ದಾರೆ.

ಪುತ್ತೂರಿನಲ್ಲಿ ಪುತ್ತೂರು, ಸುಳ್ಯ ಮತ್ತು ಕಡಬ ತಾಲೂಕು ವ್ಯಾಪ್ತಿಗೊಳಪಟ್ಟ ಸಹಾಯಕ ಪೊಲೀಸ್ ಅಧೀಕ್ಷಕರ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಎಸ್ಪಿ ಕಚೇರಿಗೆ 10 ವರ್ಷಗಳ ಹಿಂದೆಯೇ ಜಾಗವನ್ನು ಕಾಯ್ದಿರಿಸಲಾಗಿತ್ತು. ಎಸ್ಪಿ ಕಚೇರಿ ಸ್ಥಳಾಂತರಕ್ಕೆ ಮೂಲ ಸೌಕರ್ಯಗಳು ಪುತ್ತೂರಿನಲ್ಲಿದೆ ಆದ್ದರಿಂದ ಪುತ್ತೂರಿಗೆ ಎಸ್ಪಿ ಕಚೇರಿ ಸ್ಥಳಾಂತರಿಸುವಂತೆ
ಶಾಸಕರು ಮನವಿ ಮಾಡಿದ್ದಾರೆ.

ಈ ವೇಳೆ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಸಂಬಂಧ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿರುವುದಾಗಿ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ಇದೆ ವೇಳೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮೇಲೆ ಚುನಾವಣಾ ಸಮಯದಲ್ಲಿ ಹಾಕಿರುವ ಕೇಸ್‌ಗಳನ್ನು ಹಿಂಪಡೆಯುವಂತೆ ಸಚಿವರನ್ನು ಇದೇ ಸಂದರ್ಭದಲ್ಲಿ ಶಾಸಕರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್