ನೂತನ ಸ್ಪೀಕರ್ ಖಾದರ್ ವಿರುದ್ಧ ಅವಹೇಳನಾಕಾರಿ ಪೋಸ್ಟ್, ಶ್ರೀರಾಮಸೇನೆ ಮುಖಂಡನ ವಿರುದ್ಧ ದೂರು, ಪೋಸ್ಟ್ ನಲ್ಲಿ ಏನಿದೆ?

ಚಿಕ್ಕಮಗಳೂರು: ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ.

ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ.

ಈ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ.ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

ಶ್ರೀರಾಮಸೇನೆ ಮುಖಂಡ ಪ್ರೀತೇಶ್ ಎಂಬಾತ ‘ಸದನದಲ್ಲಿ ಸಭಾಧ್ಯಕ್ಷರೇ ಅನ್ನಬೇಕಾ ಅಥವಾ ಸಾಬಾ ಧ್ಯಕ್ಷರೇ ಅನ್ನಬೇಕಾ? ಎಂಬತಹ ಅವಹೇಳನಕಾರಿ ಪೋಸ್ಟ್​ ಮಾಡಿದ್ದಾನೆ. ಇತನ ಕುರಿತು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್​ ಕಾರ್ಯಕರ್ತರು ಆಗ್ರಹಿಸಿದ್ದಾರೆ‌.

ನೂತನ ಸರಕಾರದ ಸ್ಪೀಕರ್ ಆಗಿ ಮೊನ್ನೆಯಷ್ಟೇ ಯು ಟಿ ಖಾದರ್ ಸದನದಲ್ಲಿ ಸರ್ವಾನುಮತದಿಂದ ಆಯ್ಕೆಯಾಗಿದ್ದರು.ಖಾದರ್ ಬಗ್ಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿತ್ತು.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com