ಪೊಲೀಸರಿಂದ ಉಚಿತ ತರಭೇತಿ; SSLCಯಲ್ಲಿ ಆರು ಸಬ್ಜೆಕ್ಟ್ ನಲ್ಲೂ ಫೈಲ್ ಆಗಿದ್ದ ವಿದ್ಯಾರ್ಥಿ ಮರುಪರೀಕ್ಷೆಯಲ್ಲಿ ಉತ್ತೀರ್ಣ

ಬೆಂಗಳೂರು;ಬೊಮ್ಮನಹಳ್ಳಿಯ ಬಂಡೇಪಾಳ್ಯದ ಪೊಲೀಸರು SSLC ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿಧ್ಯಾರ್ಥಿಗಳನ್ನು ಗುರುತಿಸಿ ಉಚಿತ ಟ್ಯೂಷನ್​ ವ್ಯವಸ್ಥೆ ಮಾಡಿದ್ದಾರೆ.

ಪೊಲೀಸರು 20 ದಿನಗಳ ಕಾಲ 65 ವಿದ್ಯಾರ್ಥಿಗಳಿಗೆ ಟ್ಯೂಷನ್​ ವ್ಯವಸ್ಥೆ ಮಾಡಿದ್ದಾರೆ.ಈ ಸಂದರ್ಭದಲ್ಲಿ ಮಕ್ಕಳಿಗೆ ಪ್ರತಿದಿನವೂ ಎಲ್ಲಾ ಆರು ಸಬ್ಜೆಕ್ಟ್​ಗನ್ನು ಪಾಠ ಮಾಡಲು ತರಗತಿ ವ್ಯವಸ್ಥೆಯನ್ನು ಪೊಲೀಸರು ಮಾಡಿಸಿಕೊಟ್ಟಿದ್ದಾರೆ.

ತರಗತಿಗಳಲ್ಲಿ ನುರಿತ ಶಿಕ್ಷಕರಿಂದ ತರಬೇತಿ ನೀಡಿಸಿದ್ದು, ಮರು ಪರೀಕ್ಷೆಯಲ್ಲಿ 35 ಜನ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ.

ಪೊಲೀಸರು ನಗರದ ಶೊಬೋದಿನ ಶಾಲೆಯಲ್ಲಿ ಪ್ರತಿ ದಿನ ಶಿಕ್ಷಣಕ್ಕೆ ವ್ಯವಸ್ಥೆ ಮಾಡಿಸಿದ್ದರು. ಆರಕ್ಕೆ ಆರೂ ಸಜ್ಬೆಕ್ಟ್ ಫೇಲ್ ಆಗಿದ್ದ ಸಿದ್ದಿಕ್ ಎಂಬ ವಿದ್ಯಾರ್ಥಿ ಕೂಡ ತೇರ್ಗಡೆಯಾಗಿದ್ದಾನೆ. ಈ ಹಿನ್ನೆಲೆ ಪೋಷಕರು ಸಂತಸ ವ್ಯಕ್ತಪಡಿಸಿದ್ದು ಬಂಡೆ ಪಾಳ್ಯ ಠಾಣೆ ಎದುರು ತೇರ್ಗಡೆ ಹೊಂದಿದ ವಿಧ್ಯಾರ್ಥಿಗಳು ಪೊಲೀಸರಿಗೆ ಧನ್ಯವಾದ ಹೇಳಿದ್ದಾರೆ.

ಟಾಪ್ ನ್ಯೂಸ್

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಕೂಡಿ ಹಾಕಿ ಚಿತ್ರಹಿಂಸೆ; ವಿಧ್ಯಾಭ್ಯಾಸಕ್ಕೆಂದು ಕರೆದುಕೊಂಡು ಹೋಗಿ ಮನೆಗೆಲಸ ಮಾಡುವಂತೆ ಬಲವಂತ!

7 ತಿಂಗಳುಗಳಿಂದ ಬಾತ್ರೂಮ್​ನಲ್ಲಿ ಬಂಧಿಯಾಗಿದ್ದ 20 ವರ್ಷದ ಭಾರತೀಯ ವಿದ್ಯಾರ್ಥಿಯನ್ನು ಅಮೆರಿಕಾದ ಅಧಿಕಾರಿಗಳು