ಬೆಂಗಳೂರು; ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಕೆಲವೇ ಕ್ಷಣಗಳಲ್ಲಿ ಫಲಿತಾಂಶ ಹೊರ ಬೀಳಲಿದೆ.
ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.
ಮಾರ್ಚ್ 2023ರ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 31-03-2023ರಿಂದ 15-04-2023ರವರೆಗೆ ನಡೆದಿದೆ.
ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಂದು ಆರಂಭವಾಗಿತ್ತು. ಮೇ 10ರಂದು ರಾಜ್ಯದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದೆ.
ಈ ಹಿನ್ನೆಲೆ ಎಲೆಕ್ಷನ್ ಗೆ ಎರಡು ದಿನ ಮೊದಲೇ ರಾಜ್ಯದ ಸುಮಾರು 8 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ SSLC ಫಲಿತಾಂಶ ಪ್ರಕಟವಾಗಲಿದೆ.
ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆಯ ಫಲಿತಾಂಶವನ್ನು ನೋಡಲು ಪರೀಕ್ಷಾ ಮಂಡಳಿಯ ಜಾಲತಾಣ https://karresults.nic.in ಗೆ ಭೇಟಿ ನೀಡಬೇಕು.
ಬಳಿಕ ಮುಂದಿನ ಆಯ್ಕೆಗೆ ಕ್ಲಿಕ್ ಮಾಡಿ ನಿಮ್ಮ ರಿಜಿಸ್ಟ್ರೇಷನ್ ನಂಬರ್ ಕ್ಲಿಕ್ ಮಾಡಿ ಫಲಿತಾಂಶ ನೋಡಬಹುದು.