ರಾಜ್ಯದಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ, ಯಾವುದಕ್ಕೆಲ್ಲ ನಿರ್ಬಂಧ? ಇಲ್ಲಿದೆ ಮಾಹಿತಿ

ಬೆಂಗಳೂರು; ರಾಜ್ಯ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್, ಎಸ್ಡಿಪಿಐ ಸೇರಿ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಕೊನೆಗೊಂಡಿದೆ.

ಮತದಾನಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿಯಿದ್ದು, ಈ ಹಿನ್ನೆಲೆಯಲ್ಲಿ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಇಂದು ಸಂಜೆ 5 ಗಂಟೆಯ ಬಳಿಕ ಸಭೆ, ಸಮಾರಂಭ, ಉತ್ಸವ, ರ‍್ಯಾಲಿ ಮತ್ತು ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ.

ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಲಿನ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬಂದು ಪ್ರಚಾರ ಮಾಡುವುದಕ್ಕೆ ಅನುಮತಿ ಇಲ್ಲ.

ಅಭ್ಯರ್ಥಿ ಸೇರಿದಂತೆ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆಯೋಗ ಅವಕಾಶ ನೀಡಿದೆ.

ಯಾವುದೇ ರೀತಿಯ ಬಹಿರಂಗ ಸಭೆ, ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ

ಇಂದು ಸಂಜೆ 6 ಗಂಟೆಯ ನಂತರ ಮೇ 10ರಂದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ

48 ಗಂಟೆಗಳ ಕಾಲ ಧ್ವನಿವರ್ಧಕ ಬಳಕೆಗೆ ಅನುಮತಿ ಇಲ್ಲ
ಅಭ್ಯರ್ಥಿಗಳ ನಡುವಣ ದ್ವೇಷ ಉಂಟು ಮಾಡುವ ಚಟುವಟಿಕೆ ನಡೆಸಬಾರದು.

ಸೂಕ್ಷ್ಮ ಪ್ರದೇಶಗಳ ಮತಕೇಂದ್ರಗಳನ್ನು ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ಕಣ್ಗಾವಲಿನಲ್ಲಿ ಇಡಲಾಗಿದೆ‌.ಇನ್ನು ಮೇ.10ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಮೇ.13ಕ್ಕೆ ರಿಸಲ್ಟ್ ಹೊರ ಬರಲಿದೆ.

ಟಾಪ್ ನ್ಯೂಸ್

ಪ್ರವೀಣ್ ನೆಟ್ಟಾರು ಪತ್ನಿಗೆ ತೋರಿದ ಮಾನವೀಯತೆ ಫಾಝಿಲ್ & ಮಸೂದ್ ಕುಟುಂಬಕ್ಕೆ ತೋರಿಸುತ್ತಾರ ಸಿದ್ದರಾಮಯ್ಯ?ಬಿಜೆಪಿ ಅವಧಿಯಲ್ಲಿ ಹತ್ಯೆಯಾದ ಯುವಕರಿಬ್ಬರ ಕುಟುಂಬಕ್ಕೆ ಪರಿಹಾರ ಕೊಡಿಸುವಲ್ಲಿ‌ ಕಾಂಗ್ರೆಸ್ಸಿಗರು ಮೌನ?

BIG NEWS ತೀವ್ರಗೊಂಡ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆ, ನೂತನ ಸಂಸತ್ ಭವನಕ್ಕೆ ಮೆರವಣಿಗೆ ತೆರಳಲು ಯತ್ನ; ಸಾಕ್ಷಿ ಮಲಿಕ್, ವಿನೇಶ್ ಪೋಗಟ್ ಸೇರಿ ಹಲವರು ವಶಕ್ಕೆ

ನವದೆಹಲಿ;ನೂತನ ಸಂಸತ್​ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲು ಯತ್ನಿಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿದ್ದಾರೆ.

Developed by eAppsi.com