ಸಾಮಾಜಿಕ ಜಾಲತಾಣದಲ್ಲಿ ಖಾಸಗಿ ವಿಡಿಯೋ ವೈರಲ್; ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆ

ದಾವಣಗೆರೆ:ಸೋಶಿಯಲ್‌ ಮೀಡಿಯಾದಲ್ಲಿ ಖಾಸಗಿ ವಿಡಿಯೊ ವೈರಲ್ ನಿಂದ ಮನನೊಂದು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದ ಪದವಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಬ್ಬರು ಮಹಡಿ ಮೇಲೆ ಏಕಾಂತದಲ್ಲಿ ಇರುವ ವಿಡಿಯೊ ವೈರಲ್ ಆಗಿತ್ತು

ಖಾಸಗಿ ವಿಡಿಯೊ ವೈರಲ್ ಆಗುತ್ತಿದ್ದಂತೆ ಮನನೊಂದು ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ವಿದ್ಯಾರ್ಥಿ ರತನ್ (20) ನಿನ್ನೆ ರಾತ್ರಿ ಹಾಸ್ಟೆಲ್‌ ಸಮೀಪದಲ್ಲಿದ್ದ ಮರಕ್ಕೆ ನೇಣಿ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಬ್ಬರು ಬಿ.ಕಾಂ ದ್ವಿತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಸದ್ಯ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಮಕ್ಕಳ ವಿಡಿಯೊ ವೈರಲ್‌ ಮಾಡಿದವರ ವಿರುದ್ಧ ಪೋಷಕರು ಪ್ರತ್ಯೇಕ ದೂರು ದಾಖಲು ಮಾಡಿದ್ದಾರೆ.

ಟಾಪ್ ನ್ಯೂಸ್