ಕಲಬುರ್ಗಿ;ದರೋಡೆ ಪ್ರಕರಣದಲ್ಲಿ ಬಂಧಿತ
ಆರೋಪಿಯೋರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸುವಾಗ ಸರ್ಕಾರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.
ಹಮಾಲವಾಡಿ ಬಡಾವಣೆ ನಿವಾಸಿ ಶೇಖ್ ಸುಹೇಲ್ ಮೃತ ಆರೋಪಿ.ಈತನನ್ನು ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದರು.ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ ಕೋವಿಡ್ ತಪಾಸಣೆಗೆ ಕರೆದುಕೊಂಡು ಹೋದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.