ಎ.ಪಿ.ಅಬೂಬಕರ್ ಮುಸ್ಲಿಯಾರ್ ಸಿಎಂ ಸಿದ್ದರಾಮಯ್ಯಗೆ ಭೇಟಿ

ಬೆಂಗಳೂರು; ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದಾರೆ.

ಎಸ್ಸೆಸ್ಸೆಫ್ ಗೋಲ್ಡನ್ 50 ವರ್ಷಾಚರಣೆಯ ಸಮಾವೇಶದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಅವರು ಸೋಮವಾರ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಜೊತೆಗೆ ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದಾರೆ.

ಈ ವೇಳೆ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಫಝಲ್ ಕೋಯಮ ತಂಙಳ್, ರಾಜ್ಯ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಮೌಲಾನ ಶಾಫಿ ಸಅದಿ ಸೇರಿ ಹಲವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್