ಸುಳ್ಯ; ಸಾರ್ವಜನಿಕ ಸ್ಥಳದಲ್ಲಿ ಇಬ್ಬರ ಮೇಲೆ ಹಲ್ಲೆ, ವಿಡಿಯೊ ವೈರಲ್..

ಸುಳ್ಯ;ಸರಕಾರಿ ಬಸ್‌ ನಿಲ್ದಾಣದ ಬಳಿ ಇಬ್ಬರು ಕೂಲಿ ಕಾರ್ಮಿಕರನ್ನು ವ್ಯಕ್ತಿಯೋರ್ವರು ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ವೈರಲ್ ವಿಡಿಯೋದಲ್ಲಿ ಸುಳ್ಯ ಕೆಎಸ್‌ಆರ್ಟಿಸಿ ಬಸ್‌ ನಿಲ್ದಾಣ ಮುಂಭಾಗದಲ್ಲಿರುವ ನಂದಿನಿ ಮಿಲ್ಕ್ ಸ್ಟೋರ್‌ ಬಳಿ ಇಬ್ಬರು ಕಾರ್ಮಿಕರು ಕುಳಿತಿದ್ದು, ಓರ್ವ ವ್ಯಕ್ತಿ ಅಲ್ಲೆ ಪಕ್ಕದಲ್ಲಿರುವ ಬ್ಯಾಗ್‌ ಒಂದನ್ನು ತೋರಿಸಿ ಇದನ್ನು ಓಪನ್‌ ಮಾಡಿದವರು ಯಾರು ಎಂದು ಪ್ರಶ್ನಿಸಿ ಥಳಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಹಲ್ಲೆ ವೇಳೆ ಓರ್ವ ಅಲ್ಲಿಂದ ತಪ್ಪಿಸಿದ್ದು, ಮತ್ತೋರ್ವ ವ್ಯಕ್ತಿಯನ್ನು ವ್ಯಕ್ತಿ ಥಳಿಸಿ ಮೊಬೈಲ್‌ ಮೂಲಕ ಯಾರಿಗೋ ಮಾಹಿತಿ ನೀಡುವುದು ಸೆರೆಯಾಗಿದೆ.

ಘಟನೆಯ ಕುರಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ
ಭಾರೀ ವೈರಲ್‌ ಆಗಿದೆ.ಕಾರ್ಮಿಕರ ಮೇಲೆ ವಾಸ್ತವ ಅರಿಯದೆ ಸುಮ್ಮನೆ ಹಲ್ಲೆ‌ ನಡೆಸಿರುವ ಆರೋಪ ಕೇಳಿ ಬಂದಿದೆ.ಹಲ್ಲೆ ನಡೆಸಿದವನ‌ ವಿರುದ್ಧ ಕ್ರಮಕ್ಕೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಕರಾವಳಿ ಜಿಲ್ಲೆಗೆ ಚಂಡಮಾರುತದ ಭೀತಿ, ಬಿರುಗಾಳಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ;ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು, ಕರವಾಳಿ ಜಿಲ್ಲೆಗಳಿಗೆ ಚಂಡಮಾರುತದ ಭೀತಿ ಎದುರಾಗಿದೆ. ಅರಬ್ಬಿ

ಮಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ ತಡೆಗೆ “ಆ್ಯಂಟಿ ಕಮ್ಯುನಲ್‌ ವಿಂಗ್” ಸ್ಥಾಪನೆ; ಹೇಗಿರಲಿದೆ ಇದರ ರೂಪುರೇಷೆ? ಗೃಹಸಚಿವರು ಹೇಳಿದ್ದೇನು?

ಮಂಗಳೂರು:ನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್ ಆರಂಭಿಸಲು

Developed by eAppsi.com