ಸುಳ್ಯ; ಕಾಂಗ್ರೆಸ್ ಸೋಲಿನ ಪರಾಮರ್ಶೆ ಸಭೆಯಲ್ಲಿ ಉಭಯ ತಂಡಗಳ ನಡುವೆ ಮಾತಿನ ಚಕಮಕಿ, ಹಲ್ಲೆ ಆರೋಪ

ಸುಳ್ಯ:ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಕುರಿತ ಪರಾಮರ್ಶೆ ಸಭೆಯಲ್ಲಿ ಜಿ.ಕೃಷ್ಣಪ್ಪ ಹಾಗೂ ನಂದಕುಮಾರ್ ಬಣದ ನಡುವೆ ವಾಗ್ವಾದ ನಡೆದಿರುವ ಬಗ್ಗೆ ವರದಿಯಾಗಿದೆ.

ಕಡಬ ಅಂಬೇಡ್ಕರ್ ಭವನದಲ್ಲಿ ಪರಾಮರ್ಶೆ ಸಭೆ ನಡೆದಿದ್ದು ಸೋಲಿನ ಪರಾಮರ್ಶೆ ಅಭಿಪ್ರಾಯ ಸಂಗ್ರಹಿಸಲು ಕಾಂಗ್ರೆಸ್ ಸಮಿತಿಯ ಮುಖಂಡರು ಆಗಮಿಸಿದ್ದರು.

ಪಕ್ಷದಿಂದ ಉಚ್ಚಾಟಿತ ನಾಯಕರು & ಜಿ.ಕೃಷ್ಣಪ್ಪ ಬೆಂಬಲಿಗರ ನಡುವೆ ವಾಗ್ವಾದ ನಡೆದಿದೆ.

ಸ್ವತಃ ಕೃಷ್ಣಪ್ಪ ಅವರೇ ಉಚ್ವಾಟಿತ ನಾಯಕರಲ್ಲಿ, ನೀವು ಈ ಸಭೆಗೆ ಯಾಕೆ ಬಂದಿದ್ದೀರಿ? ಎಂದು ಪ್ರಶ್ನಿಸಿದರೆನ್ನಲಾಗಿದೆ. ಕೃಷ್ಣಪ್ಪ ಬೆಂಬಲಿಗರಾದ ಇತರ ನಾಯಕರು ಕೂಡ ಇದನ್ನು ಪ್ರಶ್ನಿಸಿ ಇಂದಿನ ಈ ಸಭೆಯಲ್ಲಿ ಪಕ್ಷದಿಂದ ಉಚ್ವಾಟಿತರು ಇರಲು ಅವಕಾಶ ಇದೆಯೇ ಎಂದು ಕೇಳಿದ್ದಾರೆ. ಈ ವೇಳೆ ಉಭಯ ತಂಡಗಳ ನಡುವೆ ಮಾತಿನ ಚಕಮಕಿ, ನೂಕಾಟ, ತಳ್ಳಾಟ ನಡೆದಿರುವ ಬಗ್ಗೆ ವರದಿಯಾಗಿದೆ.

ಕೃಷ್ಣಪ್ಪ ಬಣದ ಕೆಲವು ಮಂದಿ ಮುಖಂಡರು ಮತ್ತು ನಂದ ಕುಮಾರ್ ಬಣದ ನಡುವೆ ನೂಕಾಟ ತಳ್ಳಾಟ ನಡೆದ ಬಗ್ಗೆ ವರದಿಯಾಗಿದೆ.ಹಲ್ಲೆ ನಡೆದಿರುವ ಬಗ್ಗೆ ಕೂಡ ಆರೋಪ ಕೇಳಿ ಬಂದಿದೆ.

ಟಾಪ್ ನ್ಯೂಸ್