ಸುಳ್ಯ; ಎಲಿಮಲೆಯಲ್ಲಿ ದಂಪತಿ ಆತ್ಮಹತ್ಯೆ

ಸುಳ್ಯ; ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಎಲಿಮಲೆಯ ಮನೆಯೊಂದರಲ್ಲಿ ನಡೆದಿದೆ

ತಮಿಳುನಾಡು ಮೂಲದ ರಾಜನ್ ಮತ್ತು ಅವರ ಪತ್ನಿ ಮೃತರು ಎಂದು ಗುರುತಿಸಲಾಗಿದೆ.

ಇವರು ರಬ್ಬರ್ ಟ್ಯಾಪಿಂಗ್ ಮಾಡುತ್ತಾ ಜೀವನ ನಡೆಸುತ್ತಿದ್ದರು.ಈ ದಂಪತಿಗಳು ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ.

ರಾಜನ್ ಕೆಲ ಸಮಯದಿಂದ ಆನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ.ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು, ಇಂದು ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ.

ಟಾಪ್ ನ್ಯೂಸ್