ಸುಳ್ಯ; ರಬ್ಬರ್ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆ ಆಕಸ್ಮಿಕವಾಗಿ ಸಾವು; ಮಹಿಳೆಯ ಹೃದಯಕ್ಕೆ ಹೊಕ್ಕ ಕತ್ತಿ , ದುರ್ಘಟನೆ

ಸುಳ್ಯ: ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಗೆ ತೆರಳಿದ್ದ ಮಹಿಳೆ ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮೃತಪಟ್ಟ ಘಟನೆ ಎಡಮಂಗಲ ಗ್ರಾಮದ ಬಳಕ್ಕಬೆ ಎಂಬಲ್ಲಿ ನಡೆದಿದೆ.

ಗೀತಾ ಮೃತ ಮಹಿಳೆ.

ಶಿವರಾಮ ಎಂಬವರ ಪತ್ನಿ ಗೀತಾ ತಮ್ಮದೇ ರಬ್ಬರ್ ತೋಟದಲ್ಲಿ ಟ್ಯಾಪಿಂಗ್ ಕೆಲಸ ಮುಗಿಸಿ ಮನೆಗೆ ಬರುವಾಗ ಎಡವಿ ಬಿದ್ದರೆನ್ನಲಾಗಿದೆ. ಈ ಸಂದರ್ಭ ಅವರಲ್ಲಿದ್ದ ಹರಿತವಾದ ಕತ್ತಿ ಎದೆಯೊಳಗೆ ಹೊಕ್ಕು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಈ ಕುರಿತು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

ಟಾಪ್ ನ್ಯೂಸ್

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೂಡಿಕೆ;ಪಟ್ಟಿ ಬಿಡುಗಡೆ ವಿಳಂಬವಾಗುತ್ತಿರುವುದೇಕೆ? ಈ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು;ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ

Developed by eAppsi.com