BREAKING ಸುಳ್ಯ; ಬರೆ ಜರಿದು ಬಿದ್ದು ಮಣ್ಣಿನಡಿ ಸಿಲುಕಿ ಮೂವರು ಮೃತ್ಯು

ಸುಳ್ಯ:ಬರೆ ಜರಿದು ಬಿದ್ದು ಮಣ್ಣಿನಡಿ ಸಿಲುಕಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇದೀಗ ಮೂವರ ಮೃತದೇಹ ಹೊರ ತೆಗೆಯಲಾಗಿದೆ.

ಸುಳ್ಯದ ಗುರುಂಪು ಬಳಿ ಗಾಂಧಿನಗರ-ಆಲೆಟ್ಟಿ ರಸ್ತೆಯಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಬರೆ ಜರಿದು ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಮೂವರು ಕಾರ್ಮಿಕರು ಮಣ್ಣಿನಡಿ ಸಿಲುಕಿದ್ದರು.

ಜೆಸಿಬಿ ಮುಖಾಂತರ ಮಣ್ಣು ತೆಗೆಯುವ ಕೆಲಸ ನಡೆದಿದ್ದು, ಮೂವರ ಮೃತದೇಹ ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ ಎನ್ನಲಾಗಿದೆ. ಸ್ಥಳದಲ್ಲಿ ತಕ್ಷಣಾ ಕಾರ್ಯ ನಡೆದಿದೆ. ಸ್ಥಳಕ್ಕೆ ಸಚಿವ ಅಂಗಾರ ಅವರು ಭೇಟಿ ನೀಡಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್