ಸುಳ್ಯದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ

ಸುಳ್ಯ: ಸುಳ್ಯ ಮೂಲದ ಯುವತಿ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಡೈರಿ ರಿಚ್ ಐಸ್ ಕ್ರೀಂನ ಉದ್ಯಮಿ ಕನಕಮಜಲಿನ ಕಾಪಿಲ ನಿವಾಸಿ ಗಿರಿಯಪ್ಪ ಗೌಡರ ಸೊಸೆ ಐಶ್ವರ್ಯ(26) ಆತ್ಮಹತ್ಯೆಗೆ ಶರಣಾದವರು.

ಇವರು ಗಿರಿಯಪ್ಪ ಗೌಡ ಅವರ ಪುತ್ರ ರಾಜೇಶ್ ಅವರ ಪತ್ನಿ ಯಾಗಿದ್ದಾರೆ.

ಉಬರಡ್ಕ ಮಿತ್ತೂರು ಗ್ರಾಮದ ಮದುವೆಗದ್ದೆ ಸುಬ್ರಹ್ಮಣ್ಯ ಗೌಡ ಹಾಗೂ ಉಷಾ ದಂಪತಿಯ ಪುತ್ರಿಯಾದ ಐಶ್ವರ್ಯ ನಾಲ್ಕು ವರ್ಷಗಳ ಹಿಂದೆ ರಾಜೇಶ್ ಅವರನ್ನು ಮದುವೆಯಾಗಿದ್ದರು.

ಐಶ್ವರ್ಯ ಬೆಂಗಳೂರಿನಲ್ಲಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಪತಿ ರಾಜೇಶ್ ಸ್ವಂತ ಐಸ್ ಕ್ರೀಮ್ ಪಾರ್ಲರ್ ನಡೆಸಿಕೊಂಡು ಇಬ್ಬರು ಬೆಂಗಳೂರಿನಲ್ಲೇ ವಾಸವಾಗಿದ್ದರು.

ಐಶ್ವರ್ಯಳ ತಂದೆ, ತಾಯಿ ಕೂಡ ಬೆಂಗಳೂರಿನಲ್ಲೇ ನೆಲೆಸಿದ್ದದರು. ಕೆಲವು ದಿನಗಳ ಹಿಂದೆ ತಾಯಿ ಮನೆಗೆ ಹೋಗಿದ್ದ ಐಶ್ವರ್ಯ ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಟಾಪ್ ನ್ಯೂಸ್